ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಿಜೆಪಿ #BJP ರಾಜ್ಯಾಧ್ಯಕ್ಷರಾಗಿ ಇದೇ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಬಿ.ವೈ. ವಿಜಯೇಂದ್ರ BYVijayendra ಅವರು ಆಗಮಿಸಿದ್ದು, ಕಾರ್ಯಕರ್ತರ ಹರ್ಷೋದ್ಗಾರ ಮುಗಿಲುಮುಟ್ಟಿದೆ.
ರೈಲ್ವೆ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ
ನಿನ್ನೆ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಹೊರಟು ಇಂದು ಮುಂಜಾನೆ ಶಿವಮೊಗ್ಗಕ್ಕೆ ಆಗಮಿಸಿದ ವಿಜಯೇಂದ್ರ ಅವರನ್ನು ರೈಲ್ವೆ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಬಳ್ಳೇಕೆರೆ ಸಂತೋಷ್,ಮತ್ತು ಪ್ರಮುಖರಾದ ಡಾ. ಧನಂಜಯ್ ಸರ್ಜಿ, Dr. Dhananjaya Sarji ವೆಂಕಟೇಶ್ ನಾಯ್ಡು (ಬಾಬಿ) ದಿವಾಕರ್ ಶೆಟ್ಟಿ, ರಾಜೇಶ್ ಕಾಮತ್, ಭವಾನಿ ಮೋರೆ, ಉಮೇಶ್, ಡಾ. ಸುರೇಶ್, ರಮೇಶ್ ಮತ್ತು ಎಚ್.ಆರ್. ತೀರ್ಥೇಶ್ ಸೇರಿದಂತೆ ಇನ್ನಿತರ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Also read: ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಏರಿಸುವ ಶಕ್ತಿ ಮಹಿಳೆಯರಲ್ಲಿದೆ: ಸಿನು ಜೋಸ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post