ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಟಿಪ್ಪುನಗರದಲ್ಲಿ ಇಬ್ಬರು ಸಹೋದರರ ಮೇಲೆ ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ Assault with deadly weapons ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗಾಯಗೊಂಡವರು ರಹಮತ್ ಉಲ್ಲಾ (ಡಾಲರ್) ಹಾಗೂ ಅವರ ಸಹೋದರ ನಿಯಾಮತ್ ಉಲ್ಲಾ ಎಂದು ಗುರುತಿಸಲಾಗಿದೆ. ಮೂವರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಯುವಕರ ಗುಂಪು ಇವರ ಮೇಲೆ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
ಟಿಪ್ಪುನಗರದ ಗೌಸಿಯಾ ಸರ್ಕಲ್ ಸಮೀಪ ಈ ಘಟನೆ ನಡೆದಿದ್ದು, ಗಾಯಗೊಂಡ ಇಬ್ಬರನ್ನೂ ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಿಳ್ಳಘಟ್ಟದ ಆಸಿಫ್ ಹಾಗೂ ಇನ್ನೂ ಕೆಲವರಿಂದ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ. ಹಲ್ಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
Also read: ಮಾಜಿ ಡಿಸಿಎಂ ಈಶ್ವರಪ್ಪ ಜನ್ಮದಿನ | ಸ್ವಗೃಹದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ
ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















