ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ ತಾಲ್ಲೂಕಿನ ವಾರಳಿ ಬಳಿ ಕಾಲೇಜಿನ ವಿದ್ಯಾರ್ಥಿಯೋರ್ವ ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ವರದಿಯಾಗಿದೆ.
ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಕಾಲೇಜೊಂದರಲ್ಲಿ ಡಿಗ್ರಿ ಓದುತ್ತಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
Also read: ದಾನದ ಮುಖ್ಯ ಉದ್ದೇಶ ಕರ್ಮಗಳನ್ನು ತೊಳೆದುಕೊಳ್ಳುವುದು: ಸಾಯಿನಾಥ ಶ್ರೀ
ಆಗುಂಬೆ ಪೊಲೀಸ್ ಠಾಣೆ ಪಿ.ಎಸ್.ಐ. ರಂಗನಾಥ್ ಅಂತರಗಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post