ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಅಧ್ಯಕ್ಷ ಸುಂದರೇಶ್ ನೇತೃತ್ವದಲ್ಲಿ ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ, ಧರಣಿ ನಡೆಸಿದರು.
ಎಲ್‌ಪಿಜಿ ಸಿಲಿಂಡರ್ ದರ ದಿಢೀರನೆ 50ರೂ. ಹೆಚ್ಚಿಸಿರುವುದು, ಈಗಾಗಲೇ ಕೋವಿಡ್ ಸಾಂಕ್ರಾಮಿಕದಿಂದ ಹಣಕಾಸು ಬಿಕ್ಕಟ್ಟು ಮತ್ತು ಹಣದುಬ್ಬರ ಹೆಚ್ಚಳದಿಂದ ಹೈರಾಣಾಗಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರತಿ ಕುಟಂಬಕ್ಕೆ ವರ್ಷಕ್ಕೆ 12 ಗೃಹ ಬಳಕೆ ಸಿಲಿಂಡರ್‌ಗೆ ಸರ್ಕಾರ ನೀಡುತ್ತಿದ್ದ ಸಬ್ಸಿಡಿ 6 ತಿಂಗಳಿನಿಂದ ಗ್ರಾಹಕರಿಗೆ ದೊರೆಯುತ್ತಿಲ್ಲ. ಆದರೆ ದರ ಏರಿಕೆ ಮಾತ್ರ ಹೆಚ್ಚುತ್ತಲೇ ಇದೆ ಎಂದು ಪ್ರತಿಭಟನಾಕಾರು ಆರೋಪಿಸಿದರು.
ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ದರ 15 ದಿನಗಳಲ್ಲಿ ಎರಡು ಬಾರಿ ಏರಿಸಿರುವುದನ್ನು ವಿರೋಧಿಸಿ, ಇಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ತಾಳಗುಪ್ಪ ರೈಲು ಬರುವ ವೇಳೆ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ರೈಲು ತಡೆಯುವ ಹೋರಾಟಕ್ಕೆ ಮುಂದಾಗಿದ್ದು, ಬ್ಯಾರಿಕೆಟ್ ತೆಗೆದು ಒಳಗೆ ನುಗ್ಗಲು ಯತ್ನಿಸಿದರು. ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಪ್ರಧಾನ ಮಂತ್ರಿಯವರು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post