ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಹೊಸಮನೆ ಬಡಾವಣೆ 6ನೇ ಮುಖ್ಯರಸ್ತೆ ಮೂರನೇ ಅಡ್ಡ ರಸ್ತೆಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿಯಿಂದ ಯುಜಿಡಿ ಗುಂಡಿಗೆ ಜಲ್ಲಿ ಮಣ್ಣು ತುಂಬಿ ಬ್ಲಾಕ್ ಆಗಿದೆ. ಈ ಭಾಗದ ಸುಮಾರು ೫೦ಕ್ಕೂ ಹೆಚ್ಚು ಮನೆಗಳ ನಲ್ಲಿಯಲ್ಲಿ ಕೊಳೆ ಮಿಶ್ರಿತ ನೀರು ಬರುತ್ತಿದ್ದು, ಪರಿಣಾಮ ಇಲ್ಲಿಯ ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಲು ಸೂಕ್ತ ಕ್ರಮ ತೆಗೆದುಕೊಳ್ಳವಂತೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಆಗ್ರಹಿಸಿದ್ದಾರೆ.
ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಬಡಾವಣೆಯ ಜನರು ತತ್ತರಿಸಿ ಹೋಗಿದ್ದು, ಯುಜಿಡಿ ಸಮಸ್ಯೆಯಿಂದ ಕಲುಷಿತ ನೀರು ಕುಡಿದು ಸ್ಥಳೀಯರ ಆರೋಗ್ಯದಲ್ಲಿ ಏರುಪೇರಾಗಿದೆ. ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀಳುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಒಮ್ಮೆ ಶಾಸಕರು ವೀಕ್ಷಣೆ ಮಾಡಿ ಅಧಿಕಾರಿಗಳಿಗೆ ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸುವಂತೆ ಅವರು ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post