ಅವರು ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 22ರ ಬೆಳಿಗ್ಗೆ ಕುವೆಂಪು ರಂಗಮಂದಿರದಲ್ಲಿ ಯೋಗಾಭ್ಯಾಸ ಮತ್ತು ಪ್ರಾಣಾಯಾಮ ಹಾಗೂ ಧ್ಯಾನಕ್ಕೆ ಸಂಬಂಧಿಸಿದಂತೆ ಬೆಳಗಿನ ಜಾವ 5-30ಕ್ಕೆ ಯೋಗಾಭ್ಯಾಸ ಮತ್ತು ಪ್ರಾಣಾಯಾವ ಆರಂಭವಾಗುತ್ತದೆ. 6-45ರಿಂದ 7 ಗಂಟೆಯವರೆಗೆ ದ ಆರ್ಟ್ ಆಫ್ ಲಿವಿಂಗ್ ನೇತೃತ್ವದಲ್ಲಿ ಧ್ಯಾನ ನಡೆಯುತ್ತದೆ. ನಂತರ ಸಭಾ ಕಾರ್ಯಕ್ರಮ ನಡೆಯುತ್ತದೆ ಎಂದರು.
ಸಭಾ ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪ, ಮೇಯರ್ ಎಸ್. ಶಿವಕುಮಾರ್, ಉಪ ಮೇಯರ್ ಲಕ್ಷ್ಮಿ ಶಂಕರ ನಾಯ್ಕ್, ಜಿಲ್ಲಾಧಿಕಾರಿ ಆರ್. ಸೆಲ್ವಮಣಿ, ಆಯುಕ್ತ ಕೆ. ಮಾಯಣ್ಣ ಗೌಡ, ಹಿರಿಯ ವೈದ್ಯರಾದ ಡಾ. ಎಲ್.ಎನ್. ನಾಯಕ್, ಯೋಗ ಶಿಕ್ಷಕ ಡಾ.ಭ.ಮ.ಶ್ರೀಕಂಠ, ಯೋಗಾಚಾರ್ಯ ಸಿ.ವಿ ರುದ್ರಾರಾಧ್ಯ, ನಗರಸಭೆ ಮಾಜಿ ಅಧ್ಯಕ್ಷ ಎನ್.ಜೆ. ರಾಜಶೇಖರ್, ಇಂಡಿಯನ್ ಬ್ಯಾಂಕ್ ಮ್ಯಾನೇಜರ್ ರೋಹಿಣಿ ಎಂ. ಪಾಟೀಲ್ ಉಪಸ್ಥಿತರಿರುವರು ಎಂದರು.
ಸಾವಯವ ಕೃಷಿಕ ಆಹಾರ ತಜ್ಞ ಆ.ಶ್ರೀ. ಆನಂದ್ ಅವರಿಂದ ಆರೋಗ್ಯ, ಆಹಾರ, ಆನಂದ ಕುರಿತು ಉಪನ್ಯಾಸ, ವಿಶೇಷ ಯೋಗ ನೃತ್ಯ, ಯೋಗ ನೃತ್ಯ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ. ಇಂಡಿಯನ್ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಅಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಕೂಡ ಆಯೋಜಿಸಲಾಗಿದೆ. ಬೆಳಿಗ್ಗೆ 5-30ರಿಂದ 9ರವರೆಗೆ ಉಪಾಹಾರದ ಮೊದಲು ಹಾಗೂ ನಂತರದ ತಪಾಸಣೆ, ನಂಜಪ್ಪ ಆಸ್ಪತ್ರೆಗಳ ಸಮೂಹದಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ರಿಯಾಹಿತಿ ದರದಲ್ಲಿ ವಿವಿಧ ಚಿಕಿತ್ಸೆ ಮತ್ತು ತಪಾಸಣೆ, ವೈದ್ಯರೊಂದಿಗೆ ಸಮಾಲೋಚನೆ ಇರುತ್ತದೆ ಎಂದರು.
ಪರಿಸರ ದಸರಾ
Also read: ದೇಶದ ಹಿತದೃಷ್ಟಿಯಿಂದ ಅಮೃತ ಕಳಶ ಯಾತ್ರೆಗೆ ಚಾಲನೆ: ಸಂಸದ ರಾಘವೇಂದ್ರ
ಅವರು ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪರಿಸರ ದಸರಾ ಅಂಗವಾಗಿ ಈಗಾಗಲೇ ಸೈಕಲ್ ಜಾಥಾ ಮತ್ತು ಪರಿಸರ ಕುರಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿವೆ. ಇದರ ಮುಂದುವರಿದ ಭಾಗವಾಗಿ ಅ.22ರಂದು ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಮಳೆ ಇಲ್ಲದೆ ತುಂಬಾ ತೊಂದರೆಯಾಗಿದೆ. ಮುಂಬರುವ ಬೇಸಿಗೆ ದಿನಗಳಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ಹಾಗೂ ದಿನಬಳಕೆಗೆ ಉಪಯೋಗಿಸುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕಾದುದು ನಮ್ಮ ಜವಾಬ್ದಾರಿಯಾಗಿದೆ. ಸಾರ್ವಜನಿಕರಿಗೆ ನೀರಿನ ಬಳಕೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಸಾರ್ವಜನಿಕರು ನೀರನ್ನು ಯಥೇಚ್ಚವಾಗಿ ಉಪಯೋಗಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಂವಾದ ಕಾರ್ಯಕ್ರಮ ಸಾಕಷ್ಟು ಉಪಯುಕ್ತವಾಗುತ್ತದೆ ಎಂದರು.
ಮಹಾನಗರ ಪಾಲಿಕೆ ಆಯುಕ್ತ ಕೆ. ಮಾಯಣ್ಣ ಗೌಡ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಾರ್ವಜನಿಕರ ಪ್ರಶ್ನೆಗಳಿಗೆ ಸಂವಾದದ ಮೂಲಕ ಉತ್ತರಿಸುತ್ತಾರೆ. ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು, ನಗರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಮೇಯರ್ ಎಸ್. ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್, ಸದಸ್ಯರಾದ ಹೆಚ್.ಸಿ. ಯೋಗೇಶ್, ಸುರೇಖಾ ಮುರುಳೀಧರ್, ಸುವರ್ಣಾ ಶಂಕರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















