ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ #Engineering student dies of heart attack ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಬಳ್ಳಾರಿ ಮೂಲದ ಗಣೇಶ್ (21) ಮೃತಪಟ್ಟ ದುರ್ದೈವಿ. ನಗರದ ಖಾಸಗಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದ ಇವರು ವಾಜಪೇಯಿ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ತಂಗಿದ್ದರು.
ದಿಢೀರಾಗಿ ಕುಸಿದು ಬಿದ್ದ ಗಣೇಶನನ್ನು ಸಹಪಾಠಿಗಳು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆದರೆ ದುರದೃಷ್ಟವಶಾತ್ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















