ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಎಸ್’ಆರ್’ಟಿಸಿ ಬಸ್ #KSRTC Bus ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ #accident ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಳಲುರು ಬಳಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಕೀರ್ತಿ ನಾಯ್ಕ್(46) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಸುಮಾರು 9:30ರ ಸಮಯದಲ್ಲಿ ಶಿವಮೊಗ್ಗದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಸರ್ಕಾರಿ ಬಸ್ಗೆ ಹೊಳಲೂರು ಮತ್ತು ಸೂಗೂರು ಮಧ್ಯೆ ಎದುರಿನಿಂದ ಬಂದ ಟಿವಿಎಸ್ ವಿಕ್ಟರ್ ಬೈಕ್ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















