ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈಗಾಗಲೇ ಮಳೆ ಆರಂಭವಾಗಿರುವ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆ #Heavy Rain ಮುನ್ಸೂಚನೆ ನೀಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ವರದಿ ಪ್ರಕಟಿಸಿದ್ದು, ಇಂದು ಸೇರಿದಂತೆ ಜೂನ್ 13ರವರೆಗೂ ಆರೆಂಜ್ ಅಲರ್ಟ್ #Orange alert ಘೋಷಣೆ ಮಾಡಿದೆ. ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹೇಳಿದೆ.
Also read: ಶಿವಮೊಗ್ಗ | ಮನೆಯಲ್ಲಿ ವೇಶ್ಯಾವಾಟಿಕೆ | ಪೊಲೀಸ್ ದಾಳಿ | ಓರ್ವನ ಬಂಧನ
ಜೂನ್ 13ರವರೆಗೂ ಜಿಲ್ಲೆಯಾದ್ಯಂತ ಗುಡುಗು, ಮಿಂಚು, ಸಿಡಿಲು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ವರದಿಯಾಗಿದೆ.
ಇನ್ನು, ಜೂನ್ 14ರವರೆಗೂ ಜಿಲ್ಲೆಯಲ್ಲಿ ಮಳೆ ಸುರಿಯಲಿದ್ದು, ಅಂದು ಯೆಲ್ಲೋ ಅಲರ್ಟ್ ಘೋಷಿಸಿದೆ. ಅಂದು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post