ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಕೋಟೆ ಭಾಗದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ Shivamogga Hindumaha Ganapathi Rajabeedi Uthsava ಸೆ.28ರ ನಾಳೆ ನಡೆಯಲಿದ್ದು, ಇದಕ್ಕಾಗಿ ಭಾರೀ ಬಂದೋಬಸ್ತ್ ಕಲ್ಪಿಸಲಾಗಿದೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾತನಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, Mithun Kumar ಗಣಪತಿ ಮೆರವಣಿಗೆಯನ್ನು ಶಾಂತಿ ಹಾಗೂ ಸುವ್ಯವಸ್ಥೆಯಿಂದ ನಡೆಸಲು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
Also read: ಬೆಂಗಳೂರು ಬಂದ್ | ರಕ್ಷಣೆಗೆ ನಿಯೋಜನೆಗೊಂಡಿದ್ದ ಆರಕ್ಷಕರ ಆಹಾರದಲ್ಲಿ ಸತ್ತ ಇಲಿ
ಎಷ್ಟು ಪೊಲೀಸರ ನಿಯೋಜನೆ?
ನಗರದಲ್ಲಿ ವಿವಿದೆಡೆ 500 ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳು ಹಾಗೂ 2500 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಗಣಪತಿ ವಿಸರ್ಜನಾ ಮೆರವಣಿಗೆ ಬಂದೋಬಸ್ತ್ ಕರ್ತವ್ಯಕ್ಕೆ 05 ಹೆಚ್ಚುವರಿ ಪೊಲೀಸ್ ಅಧೀಕ್ಷಕರು 14 ಪೊಲೀಸ್ ಉಪಾಧೀಕ್ಷಕರು, 40 ಪೋಲಿಸ್ ನಿರೀಕ್ಷಕರು, 75 ಪೊಲೀಸ್ ಉಪನಿರೀಕ್ಷಕರು, 2,500 ಎಎಸ್ಐ, ಹೆಚ್.ಸಿ, ಪಿಸಿ ಮತ್ತು ಹೋಂ ಗಾರ್ಡ್ ಸಿಬ್ಬಂದಿಗಳು, 10 ಡಿಎಆರ್ ತುಕಡಿ, 15 ಕೆಎಸ್ಆರ್.ಪಿ ತುಕಡಿ, 02 ಆರ್.ಎ.ಎಫ್ ಕಂಪನಿಗಳು 100 ವಿಡಿಯೋ ಕ್ಯಾಮರಾಗಳು ಮತ್ತು 08 ಡ್ರೋಣ್ ಕ್ಯಾಮರಾಗಳನ್ನು ನಿಯೋಜಿಸಲಾಗಿರುತ್ತದೆ ಹಾಗೂ ಮೆರವಣಿಗೆ ಮಾರ್ಗ ಮತ್ತು ಪ್ರಮುಖ ಸ್ಥಳಗಳಲ್ಲಿ 500 ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post