ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರಕ್ಕೆ ಸಮೀಪದ ವೀರಗಾರನ ಭೈರನಕೊಪ್ಪದ ಸನಿಹದಲ್ಲಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ವೃದ್ದರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಘಟನೆ ನಡೆದಿದ್ದು, ಶಿವಮೊಗ್ಗದಿಂದ ಆಯನೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್’ಗೆ ಎದುರಿನಿಂದ ಬರುತ್ತಿದ್ದ ಸ್ಯಾಂಟ್ರೋ ಕಾರುಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರು ಚಲಾಯಿಸುತ್ತಿದ್ದ ವೃದ್ಧರಿಗೇ ಅಪಘಾತದಿಂದಾಗಿ ತೀವ್ರ ಗಾಯಗಳಾಗಿವೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ವೃದ್ಧರನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















