ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್, ರೋಟರಿ ಚಾರಿಟಿ ಫೌಂಡೇಶನ್ ಸಹಯೋಗದಲ್ಲಿ ಇಲ್ಲಿನ ವಿನಾಯಕ ನಗರ ರೋಟರಿ ಬ್ಲಡ್ ಬ್ಯಾಂಕ್ ಆವರಣದಲ್ಲಿ ಸ್ಥಾಪಿಸಲಾಗಿರುವ ಸಾರ್ವಜನಿಕ ಶುದ್ದ ಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆ ಮಾಡಲಾಯಿತು.
ರೈಲ್ವೆ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು, ಕಟ್ಟಡ ಕಾರ್ಮಿಕರು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಹಿನ್ನೆಲೆಯಲ್ಲಿ ಘಟಕ ಸ್ಥಾಪಿಸಲಾಗಿದೆ.
Also read: ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ | ಹಾಸ್ಯ ಕಥಾನಕವುಳ್ಳ ಸಾಕ್ಷ್ಯಚಿತ್ರಗಳಿಗೆ ಆದ್ಯತೆ: ಡಿ.ಎಸ್.ಅರುಣ್
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್ ಅಧ್ಯಕ್ಷ ಆರ್. ರವೀಂದ್ರ ಕುಮಾರ್, ರೋಟರಿ ಚಾರಿಟಿ ಫೌಂಡೇಶನ್ ಅಧ್ಯಕ್ಷ ಆರ್. ಶಿವಶಂಕರ್, ಸಹಾಯಕ ಗವರ್ನರ್ ಎನ್. ರಾಜೇಂದ್ರ ಪ್ರಸಾದ್, ಅನಿಲ್ ಶೆಟ್ಟಿ, ರವೀಂದ್ರ ಬೆಣ್ಣೆಹಳ್ಳಿ, ಮುರಳಿ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















