ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಮಧುಬಂಗಾರಪ್ಪ ಹಾಗೂ ಮಾಜಿ ಅಫೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್‌ಗೌಡ ಅವರಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಾಳೆ ಬೆಳಿಗ್ಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಧುಬಂಗಾರಪ್ಪ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಪಕ್ಷದ ಸದಸ್ಯತ್ವವನ್ನು ಪಡೆಯಲಿದ್ದಾರೆ. ಆರ್.ಎಂ. ಮಂಜುನಾಥ್‌ಗೌಡ ಹಾಗೂ ಮಧುಬಂಗಾರಪ್ಪ ಅವರು ಪಕ್ಷಕ್ಕೆ ಸೇರಿರುವುದರಿಂದ ಮತ್ತಷ್ಟು ಶಕ್ತಿ ಬಂದಿದೆ. ಈ ಹಿಂದಿನಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸುವರ್ಣ ಯುಗ ತೆರೆದುಕೊಳ್ಳಲಿದೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಇಬ್ಬರ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಬಲಪಡಿಸಿ ಎಲ್ಲಾ ೭ ಕ್ಷೇತ್ರಗಳಲ್ಲಿಯೂ ಗೆಲ್ಲುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post