Thursday, October 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಮಾನಸಿಕ ಆರೋಗ್ಯ ಸಂರಕ್ಷಣೆ ವ್ಯಕ್ತಿಯ ಹಕ್ಕು | ನ್ಯಾ.ಸಂತೋಷ್

ಮಾನಸಿಕ ಆರೋಗ್ಯ ಅರಿವು ಸಪ್ತಾಹ | ಗೋಪಿ ವೃತ್ತದಲ್ಲಿ ಕಾರ್ಯಕ್ರಮ

October 18, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾನಸಿಕ ಆರೋಗ್ಯ ಎನ್ನುವುದು ಪ್ರತಿಯೊಬ್ಬ ವ್ಯಕ್ತಿಯ ಹಕ್ಕಾಗಿದೆ ಎಂದು ನ್ಯಾ.ಎಂ.ಎಸ್. ಸಂತೋಷ್ ಹೇಳಿದರು.

ಗೋಪಿ ವೃತ್ತದಲ್ಲಿ ಮಾನಸಿಕ ಆರೋಗ್ಯ ಅರಿವು ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾನಸಿಕ ಆರೋಗ್ಯ ಸಂರಕ್ಷಣೆಯು ಪ್ರತಿಯೊಬ್ಬ ವ್ಯಕ್ತಿಯ ಹಕ್ಕು. ಮಾನಸಿಕ ಆರೋಗ್ಯ ಕಾಯಿದೆ 2017ರ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಗೂ ಮಾನಸಿಕ ಆರೋಗ್ಯವೆಂಬುದು ತನ್ನ ಹಕ್ಕು ಎಂದು ಅವರು ತಿಳಿಸಿದರು.
ಈ ನಿಟ್ಟಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ಅ.10ರಿಂದ 17ರವರೆಗೂ ಸತತ ಏಳು ದಿನಗಳ ಕಾಲ ಮಾನಸ ಟ್ರಸ್ಟ್’ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ಕಟೀಲ ಅಶೋಕ್ ಪೈ ಸ್ಮಾರಕ ಪೂರಕ ಆರೋಗ್ಯ ವಿಜ್ಞಾನ ಸಂಸ್ಥೆ ಮತ್ತು ಕಟೀಲ ಅಶೋಕ್ ಪೈಸ್ಮಾರಕ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ನಡೆಸಿರುವ ಅರಿವಿನ ಕಾರ್ಯಕ್ರಮಗಳು ಒಂದು ಆಂದೋಲನವೇ ಸರಿ. ಅಂದು ಡಾ. ಅಶೋಕ್ ಪೈರವರು ಮಾನಸಿಕ ಆರೋಗ್ಯದ ಕುರಿತಾದ ಹಲವಾರು ಮಿಥ್ಯೆಗಳನ್ನು ತನ್ನ ವಿವಿಧ ಕಾರ್ಯಕ್ರಮಗಳ ಮೂಲಕ ಹೋಗಲಾಡಿಸಲು ಶ್ರಮಿಸಿದರು ಎಂದರು.

ಡಾ. ರಜನಿ ಪೈ ಹಾಗೂ ಡಾ. ಪ್ರೀತಿ ಶಾನಭಾಗ ರವರು ತಮ್ಮ ಸಂಸ್ಥೆಗಳ ಮೂಲಕ ಮಾನಸಿಕ ಆರೋಗ್ಯಕ್ಕೆ ಸಂಬಂಧಪಟ್ಟ ವಿವಿಧ ಸೇವೆಗಳನ್ನು ನೀಡುತ್ತಿದ್ದಾರೆ. ಅಲ್ಲದೇ, ಇಲ್ಲಿಯ ವಿದ್ಯಾರ್ಥಿಗಳ ಮೂಲಕ ಒಂದು ಮಾನಸಿಕ ಆರೋಗ್ಯ ಸಂರಕ್ಷಣೆಯ ಪಡೆಯನ್ನೇ ನಿರ್ಮಾಣ ಮಾಡುತ್ತಿದ್ದಾರೆ. ಮಾನಸಿಕ ಆರೋಗ್ಯದ ಕುರಿತು ಆಗಲಿ ಮಾನಸಿಕ ಅನಾರೋಗ್ಯದ ಕುರಿತಾಗಲಿ ಜನರು ಮುಕ್ತವಾಗಿ ಮಾತನಾಡಲು ಹಿಂಜರಿಯುತ್ತಾರೆ. ಆದರೆ ಮಾನಸ ಸಂಸ್ಥೆ ಇಂತಹ ಸಾರ್ವಜನಿಕ ಸ್ಥಳದಲ್ಲೂ ಮಾನಸಿಕ ಆರೋಗ್ಯವನ್ನು ಮುಕ್ತವಾಗಿ ಮಾತನಾಡಬೇಕು ಹಾಗೂ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ತೋರಿಸಿ ಕೊಡುತ್ತಿದೆ. ಇದು ಒಂದು ಅತ್ಯಂತ ಪ್ರಶಂಸನೀಯ ವಿಷಯ ಎಂದರು.

ನಮ್ಮ ಕಾನೂನು ಸೇವಾ ಪ್ರಾಧಿಕಾರವೂ ಕೂಡ ಮಾನಸಿಕ ಆರೋಗ್ಯ ಪರಿಶೀಲನಾ ಸಮಿತಿಯನ್ನು ರಚಿಸಿ ನಿನ್ನೆಯಷ್ಟೇ ಮೆಗ್ಗಾನ್ ಆಸ್ಪತ್ರೆಯಲ್ಲಿ ಅದನ್ನು ಉದ್ಘಾಟಿಸಿದೆ. ಅದಕ್ಕೆ ಡಾ.ರಜನೀ ಪೈರವರು ಒಬ್ಬ ಸದಸ್ಯರಾಗಿರುತ್ತಾರೆ. ಮಾನಸಿಕ ಆರೋಗ್ಯ ಹಾಗೂ ಮಾನಸಿಕ ಅಸ್ವಸ್ಥತೆ, ಇವೆರಡರ ಕುರಿತು ಮುಕ್ತವಾಗಿ ಮಾತನಾಡುವ ಪರಸ್ಪರ ಬೆಂಬಲ ಮೂಡಿಸುವ ವಾತಾವರಣ ನಮ್ಮಲ್ಲಿ ಸೃಷ್ಟಿಯಾಗಬೇಕು ಎಂದು ಅವರು ತಿಳಿಸಿದರು.

ಮನೋಸಾಮಾಜಿಕ ಸಂರಕ್ಷಣೆಗಾಗಿ ಪ್ರತಿಜ್ಞಾವಿಧಿಯನ್ನು ಬೋಧಿಸಿದ ನಂತರ ಮಾತನಾಡಿದ ಶಿವಮೊಗ್ಗದ ಖ್ಯಾತ ಕವಯತ್ರಿ ಸವಿತಾ ನಾಗಭೂಷಣರವರು, ಮಾನಸಿಕ ಆರೋಗ್ಯ ಎಂಬುದು ಜೀವನದಲ್ಲಿ ಅತ್ಯಂತ ಪ್ರಮುಖ ಅಂಶ. ಮನಸ್ಸಿನ ಆರೋಗ್ಯವಿಲ್ಲದ ವ್ಯಕ್ತಿ ಯಾವುದನ್ನು ಸಾಧಿಸಲಾರ. ನಮ್ಮ ಮಾನಸಿಕ ಆರೋಗ್ಯವನ್ನು ಉಳಿಸಿಕೊಳ್ಳಬಲ್ಲ ದಾರಿಯನ್ನು ನಾವು ಕಂಡುಕೊಳ್ಳಬೇಕು. ಮಾತ್ರವಲ್ಲ ಮಾನಸಿಕ ತೊಂದರೆಗೆ ಒಳಗಾದ ಯಾವುದೇ ವ್ಯಕ್ತಿಗೆ ಸೂಕ್ತ ಸಮಾಧಾನ ಬೆಂಬಲ ಹಾಗೂ ಭರವಸೆಯನ್ನು ನೀಡುವ ಮನೋಭಾವ ನಮ್ಮೆಲ್ಲರದ್ದು ಆಗಿರಬೇಕು ಎಂದರು.
ನೊಂದವರಿಗೆ ಹೆಗಲು ನೀಡಲು ಪ್ರತಿಯೊಬ್ಬರೂ ಸಿದ್ದರಿರಬೇಕು. ಮನೋ ಸಾಮಾಜಿಕ ಸಂರಕ್ಷಣೆಗಾಗಿ ಎಲ್ಲರೂ ಕೂಡ ಪ್ರತಿಜ್ಞೆಯನ್ನು ಸ್ವೀಕರಿಸುವಂತೆ ಅವರು ತಿಳಿಸಿದರು.

ಈ ಪ್ರತಿಜ್ಞೆಯಲ್ಲಿ ಮಾನಸಿಕ ಆರೋಗ್ಯವನ್ನು ಹಕ್ಕು ಎಂದು ಪರಿಗಣಿಸುವ ಹಾಗೂ ಅದರ ವಿರುದ್ಧದ ಮಿಥ್ಯೆಗಳನ್ನು ಹೋಗಲಾಡಿಸಿಕೊಳ್ಳುವ ಹಾಗೂ ಮಾನಸಿಕ ಆರೋಗ್ಯವನ್ನು ಎತ್ತಿ ಹಿಡಿಯುವ ಕಾಯಿದೆಗಳನ್ನು ಸಮರ್ಥಿಸುವ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು.

ಈ ವೇಳೆ ಮಾತನಾಡಿದ ಡಾ.ಸಂಧ್ಯಾ ಕಾವೇರಿ ಅವರು, ಮನೋ ಸಾಮಾಜಿಕ ಸಂರಕ್ಷಣೆ ಎಂಬುದು ಮಾನಸಿಕ ಆರೋಗ್ಯದ ಕುರಿತ ಅರಿವು, ಮಾನಸಿಕ ಸ್ವಾಸ್ಥ್ಯಕ್ಕೆ ತೊಂದರೆಯಾದಾಗ ಆರೋಗ್ಯ ಸೇವೆಗಳನ್ನು ಶೀಘ್ರವಾಗಿ ಪಡೆಯುವುದು ಹಾಗೂ ದೊರಕಿಸುವುದಾಗಿದೆ. ಅಲ್ಲದೇ, ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಮಾರ್ಗೋಪಾಯಗಳನ್ನು ಕಂಡುಕೊಳ್ಳುವುದು, ಮಾನಸಿಕ ಬೆಂಬಲವನ್ನು ನೀಡಬಲ್ಲ ಸಾಮರಸ್ಯದ ಸಹಕಾರದ ವಿಶ್ವಾಸದ ಸಾಮಾಜಿಕ ವಾತಾವರಣವನ್ನು ಕಲ್ಪಿಸಿಕೊಳ್ಳುವುದು, ಮಾನಸಿಕ ಆರೋಗ್ಯವನ್ನು ಹಕ್ಕು ಎಂದು ಪರಿಗಣಿಸಿ ಗೌರವಿಸುವುದು, ಪ್ರತಿಯೊಬ್ಬರ ಘನತೆ ಗೌರವ ಹಾಗೂ ಭಾವನಾತ್ಮಕ ಸ್ಥಿತಿಗತಿಗಳನ್ನು ಗೌರವಿಸಿ ಬಾಳುವುದು ಇತ್ಯಾದಿ ಅಂಶಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.

ಮಾನಸಿಕ ಆರೋಗ್ಯವೆಂಬುದು ಇಡೀ ಸಮಾಜ ಅತಿ ಅಗತ್ಯವಾಗಿ ಪರಿಗಣಿಸಬೇಕಾದ ಹಾಗೂ ಸಮಗ್ರ ಆರೋಗ್ಯದಲ್ಲಿ ಸೇರಿಸಿಕೊಳ್ಳಬೇಕಾದ ಅಂಶ ಎಂಬುದನ್ನು ಸಾರ್ವಜನಿಕರ ಗಮನ ಸೆಳೆದು ಮನವರಿಕೆ ಮಾಡುವುದು ಸಪ್ತಾಹ ಕಾರ್ಯಕ್ರಮದ ಹಾಗೂ ಇಂದಿನ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಉದ್ದೇಶ ಎಂದವರು ತಿಳಿಸಿದರು.
ಮೊಂಬತ್ತಿ ಬೆಳಗಿ ಗೋಪಿ ವೃತ್ತದಿಂದ ಮಾನಸ ನರ್ಸಿಂಗ್ ಹೋಂವರೆಗೆ ಸಾಗಲಾಯಿತು. ಮಾನಸ ಸಂಸ್ಥೆಯ ನಿರ್ದೇಶಕರಾದ ಡಾ. ರಜನಿ ಎ ಫೈ, ಶೈಕ್ಷಣಿಕ ನಿರ್ದೇಶಕರಾದ ಡಾ. ಪ್ರೀತಿ ಶಾನಭಾಗ್, ಆಡಳಿತಾಧಿಕಾರಿ ಪ್ರೊ. ರಾಮಚಂದ್ರ ಬಾಳಿಗ ಹಾಗೂ ಶೈಕ್ಷಣಿಕ ಸಲಹೆಗಾರರಾದ ಡಾ. ರಾಜೇಂದ್ರ ಚೆನ್ನಿ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಶ್ರೀದೇವಿ ಕಾರ್ಯಕ್ರಮವನ್ನು ನಿರೂಪಿಸಿ, ಮಂಜುನಾಥ ಸ್ವಾಮಿ ವಂದಿಸಿದರು. ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆಯನ್ನು ಮನಶಾಸ್ತç ವಿಭಾಗದ ಮುಖ್ಯಸ್ಥರಾದ ಡಾ. ಅರ್ಚನಾ ಭಟ್, ಡಾ. ಹರಿಹರನ್, ಮಂಜುನಾಥ್ ಹಾಗೂ ಡಾ.ಕೆ.ಟಿ. ಶ್ವೇತಾ ವಹಿಸಿದ್ದರು.

ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳು ಸಿಬ್ಬಂದಿಗಳು ಹಾಗೂ ಹಲವಾರು ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೊಂಬತ್ತಿ ಬೆಳಗಿಸಿ ಪ್ರತಿಜ್ಞಾವಿಧಿಯನ್ನು ಅರ್ಥಪೂರ್ಣವಾಗಿ ನಡೆಸಿಕೊಟ್ಟರು. ಕಾರ್ಯಕ್ರಮದ ಉದ್ದೇಶ, ಏಳು ದಿನಗಳ ಕಾಲ ನಡೆಸಲಾದ ವಿವಿಧ ಅರಿವಿನ ಕಾರ್ಯಕ್ರಮಗಳ ವಿವರಗಳನ್ನು ತಿಳಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಅವರು ಎಲ್ಲರನ್ನು ಈ ಕಾರ್ಯಕ್ರಮದಲ್ಲಿ ಸ್ವಾಗತಿಸಿದರು.

ಸಪ್ತಾಹದಲ್ಲಿ ಏನೆಲ್ಲಾ ನಡೆಸಲಾಯಿತು?

ಮಾನಸ ಸಂಸ್ಥೆಯ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿಗಳು ಅ.10ರಂದು ಶಿವಮೊಗ್ಗದ ಡಿಎಆರ್ ಸಭಾಂಗಣದಿAದ ಮಾನಸ ನರ್ಸಿಂಗ್ ಹೋಂವರೆಗೆ ಜಾಗೃತಿ ಜಾಥಾವನ್ನು ನಡೆಸಿದ್ದರು. ಅದೇ ದಿನ ಜಿಲ್ಲಾ ಪೊಲೀಸ್ ಇಲಾಖೆಯ ಸುಮಾರು 200 ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಹಾಗೂ ತುರ್ತು ಸನ್ನಿವೇಶಗಳಲ್ಲಿ ಮಾನಸಿಕ ಆರೋಗ್ಯ ಸೇವೆ ವಿಷಯಗಳ ಕುರಿತು ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಅವರು ನಡೆಸಿದ್ದರು. ನ್ಯಾಯಾಧೀಶರಾದ ಎಂ.ಎಸ್. ಸಂತೋಷ್, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಉಪಸ್ಥಿತರಿದ್ದರು.

ಅದೇ ದಿನ ವೆಬಿನಾರ್ ಮೂಲಕ ಮಾನಸಿಕ ಆರೋಗ್ಯ ಸೇವೆ ಲಭ್ಯತೆ ತುರ್ತು ಹಾಗೂ ಬಿಕ್ಕಟ್ಟು ಸನ್ನಿವೇಶದಲ್ಲಿ ಎಂಬ ವಿಷಯದ ಕುರಿತು ವೆಬಿರ್ನಾ ಮೂಲಕ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು.

ಅ.11ರಂದು ಕಾಲೇಜಿನ ವಿದ್ಯಾರ್ಥಿಗಳು ಶಿವಮೊಗ್ಗ ಸಿಟಿ ಸೆಂಟರ್ ಮಾಲ್ ನಲ್ಲಿ ನೃತ್ಯರೂಪಕದ ಮೂಲಕ ಮಾನಸಿಕ ಆರೋಗ್ಯದ ಪ್ರಾಮುಖ್ಯತೆಯ ಕುರಿತು ಸಾರ್ವಜನಿಕರ ಗಮನವನ್ನು ಸೆಳೆದರು. ಅದೇ ಸ್ಥಳದಲ್ಲಿ ವಿದ್ಯಾರ್ಥಿಗಳು ಅಭಿವ್ಯಕ್ತಿ ಕಲೆ ಹಾಗೂ ಚಿಕಿತ್ಸೆ ಎಂಬ ವಿಷಯದ ಪ್ರಾತ್ಯಕ್ಷಿಕೆಯನ್ನು ನೀಡಿದರು.
ಅ.12ರಂದು ಆನ್’ಲೈನ್ ರಸಪ್ರಶ್ನೆ ಕಾರ್ಯಕ್ರಮವನ್ನು ಮಾನಸಿಕ ಆರೋಗ್ಯದ ಕುರಿತಾಗಿ ನಡೆಸಲಾಯಿತು. ಇದರಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಅ.13ರಂದು ಕಾಲೇಜಿನ ಮನಃಶಾಸ್ತç ವಿಭಾಗದ ಮೂಲಕ ಹದಿಹರೆಯದ ವಿದ್ಯಾರ್ಥಿಗಳಿಗಾಗಿ ಆಪ್ಟಿಟ್ಯೂಡ್ ಪರೀಕ್ಷೆ ಅಂದರೆ ಅಭಿಕ್ಷಮತೆ ಪರೀಕ್ಷೆಯನ್ನು ನಡೆಸಿ ಮುಂದಿನ ವಿದ್ಯಾಭ್ಯಾಸ ಹಾಗೂ ಉದ್ಯೋಗಕ್ಕೆ ಅವರನ್ನು ಪ್ರೋತ್ಸಾಹಿಸಲಾಯಿತು.

ಅ.14ರಂದು ಕಾಲೇಜಿನ ಮನಃಶಾಸ್ತç ವಿದ್ಯಾರ್ಥಿಗಳು ಡಿಸಾರ್ಸ್ಟ್ ಮ್ಯಾನೇಜ್ಮೆಂಟ್ ಅಥವಾ ಬಿಕ್ಕಟ್ಟು ನಿರ್ವಹಣೆ ಎಂಬ ವಿಷಯದ ಕುರಿತು ವಿಚಾರ ಸಂಕಿರಣವನ್ನು ನಡೆಸಿಕೊಟ್ಟರು.

ಅ.15ರಂದು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಆಪ್ತ ಎಂಬ ಆಪ್ತ ಸಮಾಲೋಚನಾ ಹಾಗೂ ಕ್ಷೇಮ ಕೇಂದ್ರವನ್ನು ಉದ್ಘಾಟಿಸಿ ಆಪ್ತ ಸಮಾಲೋಚನೆಯ ಕುರಿತು ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿತ್ತು. ಮನೋವೈದ್ಯರಾದ ಡಾ.ಪ್ರವೀಣ್ ಹಾಗೂ ಹಿರಿಯ ಆಪ್ತ ಸಮಾಲೋಚಕರಾದ ಗಣೇಶ ರಾವ್ ನಾಡಿಗೇರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಅ.16ರಂದು ಕಟೀಲ ಅಶೋಕ್ ಪೈ ಸ್ಮಾರಕ ಕಾಲೇಜಿನ ಮನಶಾಸ್ತç ಪದವಿ ವಿದ್ಯಾರ್ಥಿಗಳು ಶಿವಮೊಗ್ಗ ಎಫ್’ಎಂ ಮೂಲಕ ಮಾನಸಿಕ ಆರೋಗ್ಯ ಹಾಗೂ ಅದರ ಪ್ರಾಮುಖ್ಯತೆಯ ಕುರಿತು ಸಂವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅ.17ರಂದು ಡಾ.ಸುಭಾಸಿಸ್ ಭಾದ್ರ ,ಮುಖ್ಯಸ್ಥರು ಬಿಕ್ಕಟ್ಟು ನಿರ್ವಹಣಾ ಮನಶಾಸ್ತçಜ್ಞ ವಿಭಾಗ ,ಬೆಂಗಳೂರು ಇವರಿಂದ ಮಾನಸಿಕ ಆರೋಗ್ಯ ಪ್ರಥಮ ಚಿಕಿತ್ಸೆ/ಸೈಕಲಾಜಿಕಲ್ ಫಸ್ಟೇಡ್ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹಾಸನಾಂಬೆ ದರ್ಶನಕ್ಕೆ ಜನಸ್ತೋಮ | ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತ

Next Post

ರಾಜ್ಯದ 3 ರೈಲು ನಿಲ್ದಾಣಗಳಲ್ಲಿ ಅಮೃತ ಸಂವಾದ | ಶಿವಮೊಗ್ಗದಲ್ಲಿ ಏನೆಲ್ಲಾ ಚರ್ಚೆಯಾಯ್ತು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯದ 3 ರೈಲು ನಿಲ್ದಾಣಗಳಲ್ಲಿ ಅಮೃತ ಸಂವಾದ | ಶಿವಮೊಗ್ಗದಲ್ಲಿ ಏನೆಲ್ಲಾ ಚರ್ಚೆಯಾಯ್ತು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು -ಬರೌನಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

October 22, 2025

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

October 22, 2025

ಗೋದೀಪ | ಗೋಸಂರಕ್ಷಣೆ – ಲೋಕಕಲ್ಯಾಣಕ್ಕಾಗಿ ಇಂದು ಸಂಜೆ ವಿಶ್ವಜನನಿಯ ವಿಶಿಷ್ಟ ಪೂಜೆ

October 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು -ಬರೌನಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

October 22, 2025

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

October 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!