ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ವಿಧಾನಸಭಾ ಕ್ಷೇತ್ರದ ಸಾರ್ವಜನಿಕ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಅವರು ಇಂದು ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕೃತವಾಗಿ ಚಾಲನೆ ನೀಡಿದರು.
ಬೆಳಿಗ್ಗೆಯಿಂದಲೇ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿದ ಶಾಸಕರು, ವಾರ್ಡ್ ನಂಬರ್ 6ರ ಪುನೀತ್ ರಾಜಕುಮಾರ್ ಲೇಔಟ್, Puneeth Rajkumar Layout ವಾರ್ಡ್ ನಂಬರ್ 17ರ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ರಸ್ತೆ ಹಾಗೂ ವಾರ್ಡ್ ನಂಬರ್ 8ರ ಪಿ.ಎನ್.ಟಿ ಕಾಲೋನಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸೇರಿದಂತೆ ವಿವಿಧ ನಾಗರಿಕ ಸೌಲಭ್ಯಗಳ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು, ನಗರದ ಪ್ರತಿ ಬಡಾವಣೆಯಲ್ಲೂ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು. ವಿಶೇಷವಾಗಿ ಹೊಸದಾಗಿ ಬೆಳೆಯುತ್ತಿರುವ ಲೇಔಟ್‌ಗಳಲ್ಲಿ ಸುಸಜ್ಜಿತ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಕಲ್ಪಿಸುವುದು ನಮ್ಮ ಆದ್ಯತೆಯಾಗಿದ್ದು, ಕೈಗೆತ್ತಿಕೊಂಡಿರುವ ಎಲ್ಲಾ ಕೆಲಸಗಳು ಅತ್ಯಂತ ಗುಣಮಟ್ಟದಿಂದ ಕೂಡಿರಬೇಕು ಮತ್ತು ಸಾರ್ವಜನಿಕರಿಗೆ ಯಾವುದೇ ಅಡಚಣೆಯಾಗದಂತೆ ಶೀಘ್ರವಾಗಿ ಪೂರ್ಣಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಇಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಮುಖರಾದ ಗಾಡಿಕೊಪ್ಪ ಕುಮಾರ್, ಲಕ್ಷ್ಮಿಕಾಂತ್ ಭಟ್, ಲಕ್ಷ್ಮಿಕಾಂತ್ ಭಟ್, ಪರಮೇಶ್ ನಾಯಕ್, ವೆಂಕಟೇಶ್ ಗೌಡ, ಮಲ್ಲಿಕಾರ್ಜುನ್, ವಾಸು, ಜಗದೀಶ್, ವೆಂಕಟೇಶ್ ನಾಯ್ಕ್, ತಿಮಪ್ಪ, ರಮೇಶ್ ನಾಯ್ಕ್, ಲಲಿತಾ ಭಾಯ್ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಪ್ರಮುಖರು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















