ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಸಂಚಾರ ವ್ಯವಸ್ಥೆಯನ್ನು ಸರಿಪಡಿಸಲು ಹಾಗೂ ಅಪಘಾತಗಳನ್ನು ಕಡಿಮೆ ಮಾಡುವ ಸಲುವಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ಜಿಲ್ಲಾ ಪೊಲೀಸ್ ಇಲಾಖೆ ಇಂದಿನಿಂದ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ಬಿಎನ್’ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲು ಮುಂದಾಗಿದೆ.
ಈ ಕುರಿತಂತೆ ವೀಡಿಯೋ ಸಂದೇಶದ ಮೂಲಕ ವಾಹನ ಸವಾರರಿಗೆ ಸಲಹೆ ಹಾಗೂ ಎಚ್ಚರಿಕೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
ಅತಿ ವೇಗದ ಚಾಲನೆ, ಅಡ್ಡಾದಿಡ್ಡಿ ವಾಹನ ಚಾಲನೆ, ಫುಟ್ ಪಾತ್ ಮೇಲೆ ವಾಹನ ಚಾಲನೆ, ಸರಿಯಾಗಿಲ್ಲದ ನಂಬರ್ ಪ್ಲೇಟ್ ಬಳಕೆ ಸೇರಿದಂತೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಸವಾರರನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗುತ್ತದೆ ಎಂದಿದ್ದಾರೆ.
Also read: ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣಕ್ಕೆ ಎಂಪಿ ರಾಘವೇಂದ್ರ ಪ್ರಯತ್ನ
ಇಂದಿನಿಂದ ಜಿಲ್ಲೆಯಾದ್ಯಂತ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಬಿಎನ್’ಎಸ್ ಕಾಯ್ಡೆಯ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದಿದ್ದಾರೆ.
ಬಹುತೇಕ ಕಡೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗಿದೆ. ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳನ್ನು ಇವುಗಳ ಮೂಲಕ ಪತ್ತೆ ಮಾಡಿ, ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















