No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ : ರಾಮಕೃಷ್ಣ ಆಂಗ್ಲ ಮಾಧ್ಯಮ ಗುರುಕುಲದಲ್ಲಿ ಪಾದಪೂಜೆ

ವಿದ್ಯೆ ಜೊತೆಗೆ ಸಂಸ್ಕಾರವನ್ನು ಕಲಿತು ದೇಶಕ್ಕೆ ಶಕ್ತಿಯಾಗಿ : ಭೀಮೇಶ್ವರ ಜೋಶಿ ಕರೆ

kalpa News by kalpa News
January 1, 2026
in ಶಿವಮೊಗ್ಗ
0
ಶಿವಮೊಗ್ಗ : ರಾಮಕೃಷ್ಣ ಆಂಗ್ಲ ಮಾಧ್ಯಮ ಗುರುಕುಲದಲ್ಲಿ ಪಾದಪೂಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿದ್ಯಾರ್ಥಿಗಳು ಜೀವನದಲ್ಲಿ ವಿದ್ಯೆ ಜೊತೆಗೆ ಸಂಸ್ಕಾರವನ್ನು ಕಲಿತು ಈ ದೇಶಕ್ಕೆ ಹಾಗೂ ಸಮಾಜಕ್ಕೆ ಶಕ್ತಿಯಾಗಬೇಕು ಆ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಿ ಎಂದು ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತರಾದ ಜಿ. ಭೀಮೇಶ್ವರ ಜೋಶಿ ಕರೆ ನೀಡಿದರು.

ಅವರು ಇಂದು ಅನುಪಿನಕಟ್ಟೆಯಲ್ಲಿರುವ ಶ್ರೀ ರಾಮಕೃಷ್ಣ ಗುರುಕುಲ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಸತ್ಯನಾರಾಯಣ ಪೂಜೆ ಹಾಗೂ ಜನ್ಮದಾತರಿಗೆ ಪಾದಪೂಜೆ #Paadapooja to Parents ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಜ್ಞಾನ ಹಾಗೂ ಭಾಗ್ಯದ ಕ್ಷಣವನ್ನು ಬಳಸಿಕೊಂಡು ದೇಶಕ್ಕೆ ಒಂದು ದೊಡ್ಡ ಶಕ್ತಿಯಾಗಿ ಬೆಳೆಯಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇಂದು ನಮಗೆ ಸರಿಯಾದ ಗುರಿಯಿಲ್ಲ, ಗುರು ಇಲ್ಲ ಎಂಬಂತಹ ಪರಿಸ್ಥಿತಿ ಕೆಲವೆಡೆ ನಿರ್ಮಾಣವಾಗಿದೆ ಅದು ನಮ್ಮ ದುರಂತ. ನಾವು ಸರಿಯಾದ ಗುರಿ ಹಾಗೂ ಗುರುವನ್ನು ಹೊಂದಬೇಕು. ಆ ನಿಟ್ಟಿನಲ್ಲಿ ರಾಮಕೃಷ್ಣ ವಿದ್ಯಾಸಂಸ್ಥೆ ಮಾಡುತ್ತಿರುವ ಕಾರ್ಯ ನಿಜಕ್ಕೂ ಸ್ವಾಗತಾರ್ಹ ಎಂದರು.

ನಮ್ಮ ಭೂಮಿ ಪವಿತ್ರವಾದದ್ದು ಇಲ್ಲಿನ ಆಧ್ಯಾತ್ಮಿಕ ಸಂಪತ್ತು ಹಾಗೂ ಸಾಂಸ್ಕೃತಿಕ ಪರಂಪರೆ ನಿಜಕ್ಕೂ ನಮ್ಮ ಯುವಶಕ್ತಿಯನ್ನು ಇಡೀ ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾಗಿ ಬಳಸುತ್ತಿದೆ ಎಂದರು. ಮಕ್ಕಳು ತಂದೆ-ತಾಯಿ ತಮ್ಮ ಮಕ್ಕಳ ಅಶೋತ್ತರಗಳನ್ನು ಪೂರೈಸುವಲ್ಲಿ ಎಷ್ಟು ಕಷ್ಟಪಟ್ಟಿರುತ್ತಾರೆ ಎಂಬುದನ್ನು ಗಮನಿಸುವ ಅಗತ್ಯವಿರುತ್ತದೆ ಅದನ್ನು ಕಲಿಸಿಕೊಡುವ ನಿಟ್ಟಿನಲ್ಲಿ ಪಾದಪೂಜೆ ಅಂತಹ ಕಾರ್ಯಕ್ರಮ ಒಂದು ಪೂರಕ ಹಾಗೂ ಪ್ರೇರಕ ಎಂದರು.

ಯಾರೇ ಆಗಲಿ ನಿಮ್ಮ ಬದುಕಿನಲ್ಲಿ ನಿಮಗೆ ಸಹಾಯ ಹಾಗೂ ಸಹಕಾರ ಮಾಡಿದವರನ್ನು, ವಿದ್ಯೆ ಕಲಿಸಿದ ಗುರುಗಳನ್ನು, ಜನ್ಮ ನೀಡಿದ ತಂದೆ-ತಾಯಿಯನ್ನು ಮರೆಯಬಾರದು. ನೀವು ಮುಂದೆ ನಿಮ್ಮ ಸ್ವಂತ ಕಾಲ ಮೇಲೆ ನಿಂತಾಗ ಅವರೆಲ್ಲರ ಋಣ ತೀರಿಸುವ ಹೊಣೆಗಾರಿಕೆ ನಿಮ್ಮಲ್ಲಿ ಬೆಳೆಯಬೇಕು. ನಮಗೆ ಈ ಬದುಕನ್ನು ಕಟ್ಟಿಕೊಳ್ಳಲು ಬೆಳೆಸಿದ ಯಾವುದೇ ವ್ಯಕ್ತಿಯನ್ನಾಗಲಿ ಸಂಘ-ಸಂಸ್ಥೆಯನ್ನಾಗಲಿ, ಶಾಲೆಗಳನ್ನಾಗಲಿ, ಶಿಕ್ಷಕರನ್ನಾಗಲಿ ನಾವು ಸದಾ ಸ್ಮರಿಸುವುದು ಅತ್ಯಗತ್ಯ. ನಾನು ನನ್ನ ಜೀವನದಲ್ಲಿ 33 ವರ್ಷಗಳ ಕಾಲ ಸಾಕಷ್ಟು ಶಾಲಾ-ಕಾಲೇಜುಗಳಿಗೆ ವಿದ್ಯಾ ಸಂಸ್ಥೆಗಳಿಗೆ ಭೇಟಿ ನೀಡಿದ್ದೇನೆ ಆದರೆ ಈ ಗುರುಕುಲದ ವಿಶಿಷ್ಟತೆ ನಿಜಕ್ಕೂ ಶ್ಲಾಘನೀಯ ವರ್ಷಗಳಿಂದ ಇಂತಹ ಪಾದಪೂಜೆ ನಡೆಯುತ್ತಿರುವುದು ಮೆಚ್ಚುಗೆಯ ವಿಷಯ ನಾವು ನಮ್ಮ ಜೀವನದಲ್ಲಿ ತಂದೆ ತಾಯಿಯರ ದೇವರ ಸಮಾಜದ ಹಾಗೂ ಗುರುವಿನ ಋಣವನ್ನು ತೀರಿಸಬೇಕು ಈ ಚತುರ್ ಸ್ವರಗಳಲ್ಲಿ ಬದುಕನ್ನು ರೂಪಿಸಿಕೊಂಡಾಗ ಬದುಕು ಪರಿಪೂರ್ಣವಾಗುತ್ತದೆ ಎಂದರು.
ಕಾರ್ಯಕ್ರಮದ ದಿವ್ಯ ಸಾಹಿತ್ಯವರಿಸಿದ್ದ ಆದಿಚುಂಚನಗಿರಿ ಮಹಾ ಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ 2026-27ರ ಸಾಲಿನಲ್ಲಿ ರಾಮಕೃಷ್ಣ ವಿದ್ಯಾಸಂಸ್ಥೆ ನಡೆಸಲು ಉದ್ದೇಶಿಸಿರುವ ರಾಮಕೃಷ್ಣ ಪದವಿ ಪೂರ್ವ ಕಾಲೇಜಿನ ನಾಮಫಲಕವನ್ನು ಅನಾವರಣಗೊಳಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಮುಖ್ಯ ರೂವಾರಿಯಾಗಿದ್ದ ರಾಮಕೃಷ್ಣ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಶೋಭಾ ಆರ್. ವೆಂಕಟರಮಣ ಅವರು ಮಾತನಾಡುತ್ತಾ ಕೇವಲ ಎರಡೇ ಎರಡು ಮಕ್ಕಳಿಂದ ಆರಂಭಗೊಂಡ ವಿದ್ಯಾಸಂಸ್ಥೆ ಈಗ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳನ್ನು ಬೆಳೆಸುತ್ತಿದೆ. ಇದಕ್ಕೆ ಸಂಸ್ಥಾಪಕರಾದ ಡಿ.ಎಂ. ವೆಂಕಟರಮಣ ಅವರ ಕೊಡುಗೆ ಅಪಾರವಾದದ್ದು. ಅವರ ಹೆಜ್ಜೆಯ ಹಾದಿಯಲ್ಲಿ ಇಂದು ಸಂಸ್ಥೆ ಪಿಯು ಕಾಲೇಜನ್ನು ಸಹ ಆರಂಭಿಸಲು ಮುಂದಾಗಿದೆ ಎಂದರು.

ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ತಮ್ಮ ಜನ್ಮದಾತರ, ಪೋಷಕರ ಪಾದಪೂಜೆಯನ್ನು ಧಾರ್ಮಿಕ ವಿಧಿ-ವಿಧಾನದೊಂದಿಗೆ ನೆರವೇರಿಸಿದರು. ಇದೇ ರಾಮಕೃಷ್ಣ ವಿದ್ಯಾನಿಕೇತನದ ತಿಳಿಯ ಸಾಧಕ ವಿಧ್ಯಾರ್ಥಿ ಪ್ರಸ್ತುತ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಹಣಕಾಸು ಮತ್ತು ಲೆಕ್ಕಪತ್ರ ವಿಭಾಗದ ಆಡಳಿತ ಸಹಾಯಕರಾಗಿರುವ ಆಕಾಶ್ ಟಿ.ಎಸ್. ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದು ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. .

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಟ್ರಸ್ಟ್‍ನ ಸದಸ್ಯ ಡಿ.ಎಂ. ದೇವರಾಜ್ ಮಾತ್ನಾಡಿದರು. ಬಾಲಕ ಹಾಗೂ ಬಾಲಕಿಯರ ವಸತಿ ವಿದ್ಯಾಲಯದಲ್ಲಿ ಅತಿ ಹೆಚ್ಚು ಅಂಕ ಪಡೆದ ಆದರ್ಶ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರಾದ ತೀರ್ಥೇಶ್ ಯಶಸ್ಸಿ ಹಾಗೂ ಎ. ವೆಂಕಟೇಶ್ ಅವರು ಪರಿಚಯಿಸಿ ಪರಿಚಯಿಸಿದರು ಆ ವಿದ್ಯಾರ್ಥಿಯನ್ನು ವಿದ್ಯಾರ್ಥಿಗಳನ್ನು ಗಣ್ಯರು ಸ್ವಾಗತಿಸಿದರು ವಿದ್ಯಾಶ್ರಮ ಕೃಷ್ಣ ಟ್ರಸ್ಟ್‍ನ ಅಧ್ಯಕ್ಷ ಡಾಕ್ಟರ್ ಬಿ.ಆರ್. ನಾಗೇಶ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೋ ಆರ್ಡಿನೇಟರ್‍ಗಳಾದ ಶರತ್ ಕುಮಾರ್ ಕೆ.ಡಿ. ಹಾಗೂ ಕೆ.ಎಸ್. ಅರುಣ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPaadapooja to ParentsShimogaShivamoggaNewsಜನ್ಮದಾತರಿಗೆ ಪಾದಪೂಜೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಸೀತಾರಾಮ ಕಲ್ಯಾಣ ಶತಮಾನೋತ್ಸವ : ಜ.3ರಂದು ತುಂಗಾ ನದಿಯಲ್ಲಿ ಅದ್ದೂರಿ ತೆಪ್ಪೋತ್ಸವ

Next Post

ಜ.4 : ದಾವಣಗೆರೆಯಲ್ಲಿ “ಕಲ್ಟ್” ಚಿತ್ರದ ಸಾಂಗ್ಸ್ ರಿಲೀಸ್

kalpa News

kalpa News

Next Post
ಜ.4 : ದಾವಣಗೆರೆಯಲ್ಲಿ “ಕಲ್ಟ್” ಚಿತ್ರದ ಸಾಂಗ್ಸ್ ರಿಲೀಸ್

ಜ.4 : ದಾವಣಗೆರೆಯಲ್ಲಿ "ಕಲ್ಟ್" ಚಿತ್ರದ ಸಾಂಗ್ಸ್ ರಿಲೀಸ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL