ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೊರಬ, ಶಿರಾಳಕೊಪ್ಪ ಹಾಗೂ ಆನವಟ್ಟಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಗೆ ಶರಾವತಿ ನದಿಯಿಂದ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಮಂಜೂರಾತಿ ನೀಡುವಂತೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ #Minister Byrathi Basavaraj ಅವರು ಮಹತ್ವದ ಸಭೆ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಇಂದು ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರೊಂದಿಗೆ ಸಭೆ ನಡೆಸಲಾಯಿತು.
ಸುಮಾರು 650 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆ ಕುರಿತಾಗಿ ಚರ್ಚಿಸಲಾಯಿತು.
ಸೊರಬ ತಾಲೂಕಿನ 331 ಗ್ರಾಮಗಳು ಹಾಗೂ ಸೊರಬ, ಶಿರಾಳಕೊಪ್ಪ ಮತ್ತು ಆನವಟ್ಟಿ ಪಟ್ಟಣಪಂಚಾಯ್ತಿ ವ್ಯಾಪ್ತಿಯಲ್ಲಿ ಶರಾವತಿ ನದಿಯಿಂದ ಶಾಶ್ವತ ಕುಡಿಯುವ ನೀರಿನ ಯೋಜನೆ ಸಂಬAಧಿಸಿದAತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿ, ಯೋಜನೆಯನ್ನು ಮಂಜೂರು ಮಾಡುವಂತೆ ಒತ್ತಾಯಿಸಿದೆ. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಯೊಜನೆಗೆ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರು.
ಈ ವೇಳೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post