ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಾಗೂ ಮುಂಜಾಗ್ರ ಕ್ರಮವಾಗಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ನಿನ್ನೆ ಸಂಜೆ ಪೊಲೀಸರು ಏರಿಯಾ ಡಾಮಿನೇಷನ್ ಹಾಗೂ ಕಾಲ್ನಡಿಗೆ ವಿಶೇಷ ಗಸ್ತು ನಡೆಸಿದ್ದಾರೆ.
ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದು, ಆಯಾ ಪೊಲೀಸ್ ಉಪ ವಿಭಾಗಗಳ ಡಿವೈಎಸ್ಪಿಗಳ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಏರಿಯಾ ಡಾಮಿನೇಷನ್ ಹಾಗೂ ವಿಶೇಷ ಕಾಲ್ನಡಿಗೆ ಗಸ್ತು ನಡೆಸಿದ್ದಾರೆ.
ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರು, ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರು ಹಾಗೂ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರ ವಿರುದ್ದ ಲಘು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post