ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ವಿನೋಬನಗರದ ವಾಸದ ಮನೆಯೊಂದರ ಮೇಲೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ನಡೆಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ವಿನೋಬನಗರದ ವಾಸನ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹೊಸಮನೆಯ ನಿವಾಸಿ ಶೇಖರ್ ಮೂರ್ತಿ ಎಂಬಾತನನ್ನು ಬಂಧಿಸಲಾಗಿದೆ.
Also read: ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿ ಗೂಂಡಾ ವರ್ತನೆ ಹಿನ್ನೆಲೆ: ಬಿಜೆಪಿ ಪ್ರತಿಭಟನೆ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಡಿವೈಎಸ್’ಪಿ ಸುರೇಶ್ ಮೇಲ್ವಿಚಾರಣೆಯಲ್ಲಿ ವಿನೋಬನಗರ ಪೊಲೀಸ್ ಠಾಣೆ ಪಿಐ ಚಂದ್ರಕಲಾ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡು ಸಂತ್ರಸ್ತ ಮಹಿಳೆಯನ್ನು ರಕ್ಷಿಸಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿದೆ.
ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















