ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ #V Somanna ಅವರು ಶಿವಮೊಗ್ಗಕ್ಕೆ ಭೇಟಿ ನೀಡಿ ಇಲಾಖೆಯ ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಕುರಿತಂತೆ ಚರ್ಚೆ ನಡೆಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಿರಿಯ ಅಧಿಕಾರಿ ಹಾಗೂ ಜನಪ್ರತಿನಿಧಿಗಳ ಜೊತೆಯಲ್ಲಿ ಸಭೆ ನಡೆಸಿದ ಸಚಿವರು, ರೈಲ್ವೆ ಇಲಾಖೆಯಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಿರುವ ವಿವಿಧ ಕಾಮಗಾರಿಗಳ ಕುರಿತಾಗಿ ಚರ್ಚೆ ನಡೆಸಿದರು.
Also read: ಬೆಂಗಳೂರು-ಶಿವಮೊಗ್ಗ ವಂದೇ ಭಾರತ್ ರೈಲು | ಕೇಂದ್ರ ಸಚಿವರು ಹೇಳಿದ್ದೇನು?
ಯಾವ ಪ್ರಮುಖ 10 ಯೋಜನೆಗಳ ಚರ್ಚೆ?
- ಶಿವಮೊಗ್ಗ-ಶಿಕಾರಿಪುರ- ರಾಣೇಬೆನ್ನೂರು ಹೊಸ ರೈಲು ಮಾರ್ಗದ ಕಾಮಗಾರಿ
- ಕೋಟೆಗಂಗೂರು ಕೋಚಿಂಗ್ ಡಿಪೋ ಮತ್ತು ಟರ್ಮಿನಲ್ ಕಾಮಗಾರಿ
- ಭದ್ರಾವತಿ ಬಳಿಯ ಕಡದಕಟ್ಟೆ ಎಲ್.ಸಿ 34 ರಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವ ಕುರಿತು
- ಸಾರ್ವಜನಿಕ ಬಳಕೆಗೆ ಮುಕ್ತವಾಗಿರುವ ರೈಲ್ವೇ ಮೇಲ್ಸೇತುವೆ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು
- ಶಿವಮೊಗ್ಗ-ಬೀರೂರು ದ್ವಿಪಥ ರೈಲ್ವೇ ಹಳಿ ನಿರ್ಮಾಣ ಮಾಡುವ ಕುರಿತು
- ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ವಿಐಪಿ ಲಾಂಚ್ ಮೇಲ್ದರ್ಜೆಗೆರಿಸುವ ಕುರಿತು.
- ವಿದ್ಯಾನಗರ ರೈಲ್ವೇ ಸ್ಟೇಷನ್ ಬಳಿ ರೈಲ್ವೇ ಕೆಳ ಸೇತುವೆ ನಿರ್ಮಾಣ ಮಾಡುವ ಕುರಿತು.
- ಅಮೃತ್ ಭಾರತ್ ಯೋಜನೆಯಡಿ ರೈಲ್ವೇ ನಿಲ್ದಾಣಗಳ ಅಭಿವೃದ್ಧಿಗೆ ವೇಗ ನೀಡುವ ಕುರಿತು.
- ಯಶವಂತಪುರ-ಶಿವಮೊಗ್ಗ ಮಾರ್ಗದಲ್ಲಿ ವಂದೇ ಭಾರತ್ ರೈಲು ಪರಿಚಯಿಸುವ ಕುರಿತು.
- ಶಿವಮೊಗ್ಗ-ರೇಣಿಗುಂಟಾ-ಚೆನ್ನೆÊ ಮಾರ್ಗ ಮತ್ತೊಮ್ಮೆ ಪರಿಚಯಿಸುವ ಕುರಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post