ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಯತ್ನಿಸಿದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಅಕ್ಬರ್(21) ಎಂಬಾತನ ಕಾಲಿನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದಲ್ಲಿ ನಡೆದಿದೆ.
ನ್ಯೂ ಮಂಡ್ಲಿ ನಿವಾಸಿ ಅಕ್ಟರ್ ಎಂಬ ರೌಡಿ ಶೀಟರನ್ನು ಬಂಧಿಸಲು ತೆರಳಿದ್ದ ದೊಡ್ಡಪೇಟೆ ಪೊಲೀಸರ ಮೇಲೆ ಆತ ಹಲ್ಲೆ ಮಾಡಲು ಮುಂದಾದ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.
ಆರ್’ಎಂಎಲ್ ನಗರದ ಬಳಿ ಇತ್ತೀಚೆಗೆ ಅಮ್ಜದ್ ಹಾಗೂ ಆತನ ಸ್ನೇಹಿತರ ಮೇಲೆ ಒಂದು ಗುಂಪು ಮಾರಾಕಾಸ್ತçಗಳಿಂದ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅಮ್ಜದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದರು.
ಇದೇ ಪ್ರಕರಣದ ಆರೋಪಿಯಾಗಿದ್ದ ಅಕ್ಬರ್, ಘಟನೆಯ ನಂತರ ತಲೆಮರೆಸಿಕೊಂಡಿದ್ದ. ಪುರಲೆ ಬಳಿ ಆರೋಪಿಯಿರುವ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಆರೋಪಿಯು ಚಂದ್ರಾನಾಯ್ಕ್ ಎಂಬ ಪೊಲೀಸ್ ಸಿಬ್ಬಂದಿ ಮೇಲೆ ಹ¯್ಲೆ ನಡೆಸಿ, ಪರಾರಿಯಾಗಲು ಮುಂದಾಗಿದ್ದ. ತಕ್ಷಣವೇ ಸ್ಥಳದಲ್ಲಿದ್ದ ಸಬ್ ಇನ್ಸ್’ಪೆಕ್ಟರ್ ಮಂಜುನಾಥ್ ಅವರು, ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಗೆ ಎಚ್ಚರಿಕೆ ನೀಡಿದ್ದಾರೆ.
ಆದರೂ ಆರೋಪಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪರಿಸ್ಥಿತಿ ಕೈಮೀರುವುದನ್ನು ತಪ್ಪಿಸಲು ಆತ್ಮರಕ್ಷಣೆಗಾಗಿ ಆರೋಪಿ ಎಡಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post