ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಜ್ಯ ಅಭಿವೃದ್ಧಿಯ ಹರಿಕಾರ, ರೈತ ಪರ ಹೋರಾಟಗಾರ, ಎಲ್ಲಾ ಸಮಾಜಗಳ ಪೋಷಕ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಫೆ.28ರ ಭಾನುವಾರ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿರುವ ನನ್ನೊಲುಮೆಯ ಅಭಿನಂದನಾ ಕಾರ್ಯಕ್ರಮಕ್ಕೆ ನಗರದ ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆ ಬೆಂಬಲಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕನಕದಾಸರ ಜಯಂತಿಗೆ ರಜೆ ಘೋಷಣೆ, ಕಾಗಿನೆಲೆ ಪೀಠದ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ ಮತ್ತು ಶಿವಮೊಗ್ಗ ಕನಕ ನಗರದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನಕ್ಕೆ 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಹೇಳಿದ್ದಾರೆ.
ಸಾವಿರಕ್ಕೂ ಹೆಚ್ಚು ಕುರುಬ ಸಮಾಜದವರು ಈ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇವೆ ಎಂದು ಸಮಾಜದ ಪ್ರಮುಖರಾದ ಸಿ.ಹೆಚ್.ಮಾಲತೇಶ್, ರಾಮಕೃಷ್ಣ, ಮಧು, ಮೋಹನ, ಅಣ್ಣಪ್ಪ, ಅಣ್ಣಯ್ಯ, ಕುಮಾರ್, ಚಂದ್ರಣ್ಣ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post