ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ವಿದ್ಯಾನಗರದ ಬಿಎಚ್ ರಸ್ತೆಯಲ್ಲಿ ಇಂದು ವಾಹನಗಳ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ರೀತಿಯಲ್ಲಿ ಯಾರಿಗೂ ತೊಂದರೆಯಾಗಿಲ್ಲ.
ವಿದ್ಯಾನಗರದ ಸ್ಟೇಟ್ ಬ್ಯಾಂಕ್ ಮುಂಭಾಗದಲ್ಲಿ ಈ ಸರಣಿ ಅಪಘಾತ ಸಂಭವಿಸಿದ್ದು, ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ.
ಬಿಎಚ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕ ಏಕಾಏಕಿ ಬ್ರೇಕ್ ಆಗಿ ಹಾಕಿದ್ದಾರೆ. ಇದರ ಪರಿಣಾಮವಾಗಿ ಹಿಂದೆಯೇ ಬರುತ್ತಿದ್ದ ಆಲ್ಟೋ, ಬಲೆನೋ ಕಾರುಗಳು ಹಾಗೂ ಒಂದು ಬೈಕ್ ವಾಹನ ನಿಯಂತ್ರಣ ತಪ್ಪಿ ಒಂದಕ್ಕೊಂದು ಡಿಕ್ಕಿ ಹೊಡೆದಿವೆ.
ಮುಖ್ಯ ರಸ್ತೆಯಲ್ಲೇ ಈ ಸರಣಿ ಅಪಘಾತ ಸಂಭವಿಸಿದ ಕಾರಣ, ಕೆಲಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















