ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಿನ್ನೆ ಶಿಕಾರಿಪುರದಲ್ಲಿ ತಮ್ಮ ಸ್ವಗೃಹದಲ್ಲಿ ನಿಧನರಾದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಶೇಖರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಭದ್ರಾ ಕಾಡಾ ಕಚೇರಿಯಲ್ಲಿ ಹಾಲಿ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರ ಸಮ್ಮುಖದಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶೇಖರಪ್ಪ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ ಸಾಕಷ್ಟು ಅನುದಾನ ಒದಗಿಸಿ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ನಿರಂತರ ಅಭಿವೃದ್ದಿ ಕೆಲಸಗಳು ನಡೆಯುವಂತೆ ನೋಡಿಕೊಂಡಿದ್ದಾರೆ. ರೈತರಿಗೆ ಮೂಲಭೂತ ಸೌಕರ್ಯ ಒದಗಿಸಲು ಶ್ರಮಿಸಿದ್ದಾರೆ, ಇದರಿಂದ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ಬಹಳಷ್ಟು ಅನುಕೂಲವಾಗಿದೆ ಎಂದು ನೆನಪಿಸಿಕೊಂಡರು.
ಅವರ ಜೀವಿತಾವಧಿಯಲ್ಲಿ ಬಿಜೆಪಿ ಪಕ್ಷಕ್ಕಾಗಿ ಹಾಗೂ ಸಮಾಜಕ್ಕಾಗಿ ದುಡಿದಿದ್ದಾರೆ ಜೊತೆಗೆ ವಿವಿಧ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ಕಷ್ಟದಲಿದ್ದ ಬಡ ಜನರಿಗೆ ನೆರವಾಗಿದ್ದಾರೆ ಎಂದರು.
ಅವರ ಅಗಲಿಕೆ ರೈತರಿಗೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ ಭಗವಂತ ನೀಡಲಿ ಎಂದು ಈ ಸಮಯದಲ್ಲಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಕೃಷ್ಣಮೂರ್ತಿ ಕುಲಕರ್ಣಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಅರುಣ್, ಸಹಕಾರ ಇಲಾಖೆಯ ನಿರ್ದೇಶಕರಾದ ನಯನ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post