ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಮ್ಯಾಕ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪಕ್ಕದಲ್ಲಿ ಮಹಾನಗರ ಪಾಲಿಕೆ ಅನುದಾನದಲ್ಲಿ ಶ್ರೀ ವಿಘ್ನೇಶ್ವರ ಆಟೋ ನಿಲ್ದಾಣವನ್ನು ಅಭಿವೃದ್ಧಿಪಡಿಸಿದ್ದು. ಹೆಚ್. ಸಿ. ಯೋಗೇಶ್ ಉದ್ಘಾಟನೆ ನೆರವೇರಿಸಿದರು.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್. ಸಿ. ಯೋಗೇಶ್ ರವರು ಮಹಾನಗರ ಪಾಲಿಕೆ ಸದಸ್ಯರಾಗಿದ್ದ ಸಂದರ್ಭದಲ್ಲಿ ಸುಮಾರು ಮೂರು ಲಕ್ಷ ರೂ. ಅನುದಾನ ನೀಡಿದ್ದರು.
Also read: ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು
ಈ ಸಂದರ್ಭದಲ್ಲಿ ಮಾಜಿ ಮಹಾನಗರ ಪಾಲಿಕೆ ಮಹಾಪೌರರಾದ ನಾಗರಾಜ್ ಕಂಕಾರಿ, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್, ಮಾಜಿ ಮಹಾನಗರ ಪಾಲಿಕೆ ಸದಸ್ಯ ಐಡಿಯಲ್ ಗೋಪಿ, ಸರ್ಜಿ ಆಸ್ಪತ್ರೆ ಮಾಲೀಕರಾದ ನಮಿತಾ ಧನಂಜಯ್ ಸರ್ಜಿ, ಜಯನಗರ ಪೊಲೀಸ್ ಸ್ಟೇಷನ್ ವೃತ್ತ ನಿರೀಕ್ಷಕರಾದ ಸಿದ್ದನಗೌಡರವರು, ಪ್ರಮುಖರಾದ ಒಡೆಯರ್, ಡಾ. ಜಯಂತ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಡಾ. ದಿನೇಶ್ ಹಾಗೂ ಆಟೋ ಚಾಲಕರು, ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post