No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಉತ್ತಮ ಇಂಟರ್‌ನೆಟ್ ಸೇವೆ ಒದಗಿಸಲು ಅಗತ್ಯ ಕ್ರಮ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 1, 2021
in ಶಿವಮೊಗ್ಗ
0
ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮವಾದ ಇಂಟರ್‌ನೆಟ್ ಹಾಗೂ ಮೊಬೈಲ್ ಸೇವೆಯನ್ನು ಒದಗಿಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಮೊಬೈಲ್ ಕಂಪನಿಗಳಿಂದ ಹಾಗೂ ಬಿ.ಎಸ್.ಎನ್.ಎಲ್. ಸಂಸ್ಥೆಯಿಂದ ಆಗಿರಬಹುದಾದ ಟವರ್ ನಿರ್ಮಾಣ ಮತ್ತು ತರಂಗಾಂತರಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸ್ಥಳೀಯವಾಗಿ ಉಲ್ಬಣವಾಗಿರಬಹುದಾದ ಸಮಸ್ಯೆಯನ್ನು ಪರಿಹರಿಸಿ, ತುರ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಮೊಬೈಲ್ ಕಂಪನಿಗಳ ಮುಖ್ಯಸ್ಥರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಮುಂದಿನ ಶುಕ್ರವಾರ ಬೆಂಗಳೂರಿನಲ್ಲಿ ಸಭೆ ನಡೆಸಿ, ಸಂಸ್ಥೆಯ ಮುಖ್ಯಸ್ಥರಿಗೆ ಸೂಚನೆ ನೀಡಲಾಗುವುದಲ್ಲದೆ ಸಕಾಲದಲ್ಲಿ ಟವರ್‌ಗಳನ್ನು ನಿರ್ಮಿಸಿ, ಉತ್ತಮ ಸೇವೆಯನ್ನು ನೀಡುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದರು.

ಬಿ.ಎಸ್.ಎನ್.ಎಲ್. ಸಂಪರ್ಕವಿರುವ ಅನೇಕ ಕಡೆಗಳಲ್ಲಿ ವಿದ್ಯುತ್, ಜನರೇಟರ್, ನಿರ್ವಹಣೆ ಸಿಬ್ಬಂಧಿ ಕೊರತೆ ಮುಂತಾದ ಕಾರಣಗಳಿಂದಾಗಿ ಉತ್ತಮ ಸೇವೆ ನಿರೀಕ್ಷಿಸುವುದು ಕಷ್ಟಸಾಧ್ಯವಾಗಿದೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಕೂಡಲೇ ಉತ್ತಮ ಸೇವೆ ನೀಡಲು ಕ್ರಮ ವಹಿಸುವಂತೆ ವಿಭಾಗೀಯ ವ್ಯವಸ್ಥಾಪಕ ವೆಂಕಟೇಶ್ ಅವರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಟವರ್‌ಗಳನ್ನು ನಿರ್ಮಿಸುವ ಸಂಬಂಧ ಖಾಸಗಿ ಕಂಪನಿಗಳಿಗೆ ಪ್ರದೇಶಗಳನ್ನು ವಿಂಗಡಿಸಿ ಹಂಚಿಕೆ ಮಾಡಲಾಗಿದೆ. ಇದರಿಂದಾಗಿ ಶೇ. 80ರಷ್ಟು ಪ್ರದೇಶಕ್ಕೆ ಇಂಟರ್‌ನೆಟ್ ಸಂಪರ್ಕ ಕಲ್ಪಿಸಲು ಸಾಧ್ಯವಾಗಿದೆ. ಉಳಿದ ಶೇ.20ರಷ್ಟು ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು ಸಂಬಂಧಿಸಿದವರಿಗೆ ಒತ್ತಾಯಿಸಲಾಗುವುದು ಎಂದರು.

ಆರ್.ಆರ್.ಹೆಚ್. ಎಂ. ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿನ ಅಂಚೆ ಕಚೇರಿಗಳು, ಆರೋಗ್ಯ ಕೇಂದ್ರಗಳು, ಗ್ರಾಮ ಪಂಚಾಯಿತಿ, ಶಾಲಾ-ಕಾಲೇಜುಗಳು ಸೇರಿದಂತೆ 1000ಕ್ಕೂ ಹೆಚ್ಚಿನ ಭಾಗದಲ್ಲಿ ಉಚಿತ ಸಂಪರ್ಕ ಸೇವೆ ನೀಡಲಾಗುತ್ತಿದೆ. ನಿಗಧಿತ ಪ್ರದೇಶದಿಂದ ದೂರದ ಪ್ರದೇಶಕ್ಕೆ ಅದು ಹೊಂದಿರುವ ಕಿ.ಮೀ.ಗಳ ಅಂತರದಲ್ಲಿ ಶುಲ್ಕ ನಿಗಧಿಪಡಿಸಿ, ಸಂಪರ್ಕ ಕಲ್ಪಿಸಲು ಕ್ರಮವಹಿಸಲಾಗಿದೆ ಎಂದ ಅವರು, ಮಕ್ಕಳ ಆನ್‌ಲೈನ್ ಕ್ಲಾಸ್‌ಗಳಿಗೆ ಅಡಚಣೆಯಾಗದಂತೆ ಅಗತ್ಯ ಸಾಮರ್ಥ್ಯವಿರುವ ಸೇವೆಯನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಅವರು ಮಾತನಾಡಿ, ಕೋವಿಡ್ ಸೋಂಕಿನ ಕಾರಣದಿಂದಾಗಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವಕರು ವರ್ಕ್ ಫ್ರಮ್ ಹೋಮ್ ಕಾರಣದಿಂದಾಗಿ ಮನೆಯಲ್ಲಿಯೇ ಇದ್ದು ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಉದ್ಯೋಗಿಗಳಿಗೆ ಬಹು ಅಗತ್ಯವಾಗಿರುವ ಇಂಟರ್ ನೆಟ್ ಸೌಲಭ್ಯಕ್ಕಾಗಿ ಮನೆ ಏರಿ, ಮರವೇರಿ ಕುಳಿತುಕೊಳ್ಳುತ್ತಿದ್ದಾರೆ. ತೀರ್ಥಹಳ್ಳಿ, ಸಾಗರ, ಹೊಸನಗರ ಸೇರಿದಂತೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಹೆಚ್ಚಿನ ಸಮಸ್ಯೆ ಇರುವುದನ್ನು ಗುರುತಿಸಲಾಗಿದೆ. ಈ ವ್ಯವಸ್ಥೆ ಜನಸಮಾನ್ಯರಿಗೆ ತೀವ್ರ ತರಹದ ಅಡಚಣೆಯನ್ನುಂಟು ಮಾಡಿದೆ. ಇದರ ನಿರ್ವಹಣೆ ಮಾಡಬೇಕಾದುದು ನಮ್ಮ ಜವಾಬ್ದಾರಿಯಾಗಿದ್ದು, ಈ ಸಮಸ್ಯೆಯ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗವುದು ಎಂದರು.

ಸಭೆಯಲ್ಲಿ ಸೂಡಾ ಅಧ್ಯಕ್ಷ ಜ್ಯೋತಿ ಎಸ್.ಪ್ರಕಾಶ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaShimogaShimoga DC ShivakumarShivamoggaShivamogga Newsಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Previous Post

ಪ್ರತಿಯೊಬ್ಬ ಶಾಸಕರು ನಮ್ಮೊಂದಿಗೆ ಕೈಜೋಡಿಸಿದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ: ಪವಿತ್ರ ರಾಮಯ್ಯ

Next Post

ಕೊರೋನಾ ಸೋಂಕಿತರು ಗಡಿ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕೊರೋನಾ ಸೋಂಕಿತರು ಗಡಿ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL