No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಸರ್ಕಾರಿ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ | ಡಿಸಿ ಖಡಕ್ ಎಚ್ಚರಿಕೆ

kalpa News by kalpa News
August 21, 2025
in ಶಿವಮೊಗ್ಗ
0
ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದಲ್ಲಿ ಈ ವಸ್ತು ಕಡ್ಡಾಯವಾಗಿ ಇರಬೇಕು: ಡಿಸಿ ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸೇವಾನಿರತ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂಧಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರು ಯಾವುದೇ ಆತಂಕಗಳಿಲ್ಲದೇ ನಿರ್ಭೀತಿಯಿಂದ ಪ್ರಮಾಣಿಕವಾಗಿ ಜನಸಾಮಾನ್ಯರ ಸೇವೆಗೆ ಸಮರ್ಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ #DC Gurudatta Hegade ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರಿ ನೌಕರರ ಕುಂದು-ಕೊರತೆ, ಸಮಸ್ಯೆ, ಸೇವಾ ಸೌಲಭ್ಯಗಳ ತ್ವರಿತ ಸ್ಪಂದನೆಗಾಗಿ ರಚಿಸಲಾಗಿರುವ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ನೌಕರರಿಗೆ ತಮ್ಮ ಕಾರ್ಯಕ್ಷೇತ್ರದಲ್ಲಿ ಯಾವುದೇ ಅಭದ್ರತೆ ಕಾಡದಂತೆ ನೋಡಿಕೊಳ್ಳಬೇಕಾದುದು ಹಾಗೂ ವ್ಯವಸ್ಥೆಗೆ ಪೂರಕವಾಗಿ ಸಹಕರಿಸಬೇಕಾದುದು ನಾಗರೀಕರೆಲ್ಲರ ಕರ್ತವ್ಯವಾಗಿದೆ. ಸಾರ್ವಜನಿಕ ಜೀವನದಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ಸೂಕ್ತ ರಕ್ಷಣೆ ಸಿಗಬೇಕು. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ನೌಕರರ ಮೇಲೆ ಸಲ್ಲದ ಕಾರಣಕ್ಕೆ ಹಲ್ಲೆಗೆ ಮುಂದಾಗುವುದು, ಅನುಚಿತವಾಗಿ ವರ್ತಿಸುವುದನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ದಂಡನೆಗೆ ಗುರುಪಡಿಸಲಾಗುವುದು ಎಂದರು.

ಇತ್ತೀಚಿನ ದಿನಗಳಲ್ಲಿ ಆರ್.ಟಿ.ಐ. ಅರ್ಜಿಗಳನ್ನು ಸಲ್ಲಿಸಿ, ಅಧಿಕಾರಿಗಳಿಗೆ ಇನ್ನಿಲ್ಲದಂತೆ ಕಾಡುವುದು, ಬೇಡಿಕೆ ಸಲ್ಲಿಸುವುದು, ಸೇವಾ ಕ್ಷೇತ್ರದಲ್ಲಿ ಅನಗತ್ಯ ಕಿರಿಕಿರಿ ಉಂಟು ಮಾಡುತ್ತಿರುವುದು ಕಂಡುಬರುತ್ತಿದೆ. ಅಲ್ಲದೇ ಪತ್ರಿಕೆಗಳಲ್ಲಿ ಆಧಾರರಹಿತ ಆರೋಪ ಮಾಡುವುದಲ್ಲದೇ ಅಸಂವಿಧಾನಿಕ ಪದಗಳ ಬಳಕೆ ಮಾಡುತ್ತಿರುವುದನ್ನೂ ಸಹ ಗಂಭೀರವಾಗಿ ಪರಿಗಣಿಸಲಾಗುವುದು. ಅಂತಹ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದರು.
ಜಿಲ್ಲೆ, ನಗರ ಮತ್ತು ಪಟ್ಪಣ ಪ್ರದೇಶಗಳಲ್ಲಿ ನೌಕರರ ಬೇಡಿಕೆಗನುಗುಣವಾಗಿ ವಸತಿ ಗೃಹಗಳು ದೊರೆಯುತ್ತಿಲ್ಲ. ಅಲ್ಲದೇ ಹಲವು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಅನೇಕ ವಸತಿ ಗೃಹಗಳು ದುರಸ್ತಿ ಕಾಣದಿರುವುದನ್ನು ಕೂಡ ಗಮನಿಸಲಾಗಿದೆ. ಲಭ್ಯವಿರುವ ವಸತಿಗೃಹಗಳ ಹಂಚಿಕೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಚರ್ಚಿಸಿದ ಅವರು, ವಸತಿಗೃಹಗಳ ದುರಸ್ತಿ ಬಗ್ಗೆ ಲೋಕೋಪಯೋಗಿ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಕ್ಕೆ ಸೂಚಿಸಲಾಗುವುದು ಎಂದರು.

ರಾಜ್ಯ ಸರ್ಕಾರಿ ನೌಕರರ ಆರೋಗ್ಯ ಸುರಕ್ಷತೆಗಾಗಿ ಜಾರಿಯಾಗಿರುವ ನಗದು ರಹಿತ ಆರೋಗ್ಯ ಸೇವೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಸಮರ್ಪಕ ಅನುಷ್ಟಾನದಿಂದಾಗಿ ಸಾವಿರಾರು ಕುಟುಂಬಗಳು ಉತ್ತಮ ಗುಣಮಟ್ಟದ ಚಿಕಿತ್ಸೆ ಪಡೆಯಲು ಸಾಧ್ಯವಾಗಲಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಡಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ 16000 ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ನಗದು ರಹಿತ ಆರೋಗ್ಯ ಸೌಲಭ್ಯವನ್ನು ಪಡೆದುಕೊಳ್ಳಲಿದ್ದಾರೆ. ಸರ್ಕಾರಿ ನೌಕರರಿಗೆ ದುಬಾರಿ ವೆಚ್ಚದ ಮಾರಣಾಂತಿಕ ಕಾಯಿಲೆಗಳು ಹಾಗೂ ಶಸ್ತ್ರ ಚಿಕಿತ್ಸೆ ಸೇರಿದಂತೆ ಬಹುತೇಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ದೊರೆಯಲಿದೆ ಎಂದರು.
ಈ ಯೋಜನೆಯಡಿ ಜಿಲ್ಲಾ ಕೇಂದ್ರಗಳಲ್ಲಿನ ಅನೇಕ ಆಸ್ಪತ್ರೆಗಳು ಆರೋಗ್ಯ ಸೇವೆ ಒದಗಿಸಲು ಈವರೆಗೆ ನೋಂದಣಿಯಾಗದಿರುವುದು ಕಂಡುಬಂದಿದೆ.  ನಗರದ ಪ್ರತಿಷ್ಠಿತ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ, ಯೋಜನಾ ವ್ಯಾಪ್ತಿಗೊಳಪಟ್ಟು ಒಪ್ಪಂದ ಮಾಡಿಕೊಂಡು ನೌಕರರಿಗೆ ಅವರ ಕುಟುಂಬದ ಅವಲಂಬಿತರಿಗೆ ಆರೋಗ್ಯ ಸೇವೆ ಒದಗಿಸಲು ಮುಂದಾಗುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ಕುಮಾರ್ಅವರು ಮಾತನಾಡಿ, ಕಾಲಕಾಲಕ್ಕೆ ಬದಲಾಗುತ್ತಿರುವ ಆಡಳಿತ ವ್ಯವಸ್ಥೆಗೆ ಪೂರಕವಾಗಿ ನೌಕರರೂ ಕೂಡ ಹೊಂದಿಕೊಳ್ಳಬೇಕಾಗಿದೆ. ಸೇವಾವಧಿಯಲ್ಲಿ ನೌಕರರಿಗೆ ಹೊಸದಾಗಿ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳು, ಕಾಯ್ದೆಗಳ ಪೂರ್ಣ ಜ್ಞಾನ ಇರಬೇಕು. ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನೌಕರರಿಗೂ ಅರಿವು ಇರಬೇಕಾದುದು ಅಗತ್ಯ. ಈ ದಿಸೆಯಲ್ಲಿ ವಿವಿಧ ಯೋಜನೆಗಳು, ಕಾಯ್ದೆಗಳ ಅನುಷ್ಠಾನದ ಕುರಿತು ತರಬೇತಿ ಕಾರ್ಯಾಗಾರಗಳನ್ನು ಜಿಲ್ಲಾಡಳಿತ ಮತ್ತು ಆಡಳಿತ ಸುಧಾರಣಾ ಇಲಾಖೆ, ಜಿಲ್ಲಾ ತರಬೇತಿ ಸಂಸ್ಥೆಗಳ ಮೂಲಕ ಆಯೋಜಿಸಬೇಕು ಎಂದವರು ನುಡಿದರು. ಜಿಲ್ಲಾಧಿಕಾರಿಗಳು ಅಗತ್ಯ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು ಸೂಚಿಸಲಾಗುವುದು ಎಂದರು.
ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ವರ್ಗಾವಣೆಗೊಂಡು ಜಿಲ್ಲೆಗೆ ಬಂದಲ್ಲಿ ಅವರ ಮಕ್ಕಳ ಶಿಕ್ಷಣ ಮುಂದುವರೆಸಲು ಶಾಲಾ ದಾಖಲಾತಿಗಾಗಿ ತೆರಳಿದಾಗ, ಪ್ರವೇಶ ನಿರಾಕರಿಸುವುದು ಸಾಮಾನ್ಯ ಸಂಗತಿಯಾಗಿದೆ. ಶಾಲಾ ಆಡಳಿತ ಮಂಡಳಿಯವರಿಗೆ ದಾಖಲಾತಿಗಾಗಿ ಸೂಕ್ತ ಮಾರ್ಗದರ್ಶನ ನೀಡುವಂತೆ ಆರ್.ಮೋಹನ್ ಕುಮಾರ್ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ ಸ್ವಾಮಿ, ಆರ್.ಪಾಪಣ್ಣ, ಡಾ. ಹಿರೇಮಠ್, ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿದ್ದಬಸಪ್ಪ, ಉಮೇಶ್ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು, ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರುಗಳು ಹಾಗೂ ನಗರದ ಖಾಸಗಿ ಆಸ್ಪತ್ರೆಗಳ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     
https://kalpa.news/wp-content/uploads/2025/08/VID-20250820-WA0058.mp4
https://kalpa.news/wp-content/uploads/2024/04/VID-20240426-WA0008.mp4

Tags: DC Gurudatta HegadeKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಜಿಲ್ಲಾಧಿಕಾರಿ ಗುರುದತ್ತ ಹೆಗಡೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆ.22 – 24 | ನಾಟ್ಯಾರಾಧನಾ ರಾಷ್ಟ್ರೀಯ ನೃತ್ಯ ಮಹೋತ್ಸವ

Next Post

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ವಾಹನ ಡಿಕ್ಕಿ | ಗಂಭೀರ ಗಾಯ | ಆಸ್ಪತ್ರೆಗೆ ದಾಖಲು

kalpa News

kalpa News

Next Post
ಶಿವಮೊಗ್ಗದಲ್ಲಿ ಭೀಕರ ಅಪಘಾತ | MBBS ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು | ಹೇಗಾಯ್ತು ಘಟನೆ?

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ವಾಹನ ಡಿಕ್ಕಿ | ಗಂಭೀರ ಗಾಯ | ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL