ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪೊಲೀಸರ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲೆತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ ನಗರದಲ್ಲಿ ನಡೆದಿದೆ.
ರೌಡಿ ಶೀಟರ್ ಭವಿತ್ (26) ಬಂಧಿತ ಆರೋಪಿ. ಭವಿತ್ ವಿರುದ್ದ ಕೊಲೆ, ದರೋಡೆ, ಕೊಲೆ ಯತ್ನ ಸೇರಿದಂತೆ ಏಳು ಪ್ರಕರಣಗಳು ದಾಖಲಾಗಿದ್ದವು. ಜಿಲ್ಲೆಯಿಂದ ಈತನನ್ನು ಗಡಿಪಾರುಗೊಳಿಸಲಾಗಿತ್ತು. ಶಿವಮೊಗ್ಗಕ್ಕೆ ಆರೋಪಿ ವಾಪಾಸ್ ಆಗಿದ್ದು. ಭಾನುವಾರ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾಯಕ ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ, ಗಲಾಟೆ ಮಾಡಿ ಕೊಲೆಗೆ ಯತ್ನಿಸಿದ ಹಿನ್ನೆಲೆ ಸುನೀಲ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಲು ತೆರಳಿದ ವೇಳೆ, ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿ, ದಾಳಿಯಿಂದ ಸಿಬ್ಬಂದಿ ಶ್ರೀಕಾಂತ್ ಎಂಬುವರು ಗಾಯಗೊಂಡಿದ್ದಾರೆ. ತಕ್ಷಣವೇ ಆತ್ಮ ರಕ್ಷಣೆ ಉದ್ದೇಶದಿಂದ ಸಬ್ ಇನ್ಸ್’ಪೆಕ್ಟರ್ ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ.
ವಿನೋಬನಗರ ಠಾಣೆ ಸಬ್ ಇನ್ಸ್’ಪೆಕ್ಟರ್ ಸುನೀಲ್ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post