ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿಗೆ ಸಮೀಪದ ಗಾಜನೂರು ಬಳಿಯಲ್ಲಿ ಕಾರು ಪಲ್ಟಿಯಾಗಿ ಯುವಕ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಗಾಜನೂರು ಸಮೀಪ ಭಾನುವಾರ ರಾತ್ರಿ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಮೃತ ಯುವಕನನ್ನು ವಿದ್ಯಾನಗರ ನಿವಾಸಿ, ಕೃಷಿಕ ಕೃಷ್ಣಮೂರ್ತಿ ಅವರ ಪುತ್ರ ಪ್ರಜ್ವಲ್ (22) ಎಂದು ಗುರುತಿಸಲಾಗಿದೆ.
ಕೃಷ್ಣಮೂರ್ತಿ ಮೂಲತಃ ಚನ್ನಗಿರಿ ತಾಲ್ಲೂಕಿನ ಬೆಟ್ಟದ ಕಡೂರಿನವರು. ಪ್ರಜ್ವಲ್ ಹಾಗೂ ಸ್ನೇಹಿತರು ಎರಡು ವಾಹನಗಳಲ್ಲಿ ಮಂಡಗದ್ದೆಗೆ ಊಟಕ್ಜೆ ತೆರಳಿದ್ದರು.
Also read: ದೇಶದ ಅಭಿವೃದ್ಧಿಯಲ್ಲಿ ಎನ್‌ಎಸ್‌ಎಸ್ ಪಾತ್ರ ತುಂಬಾ ದೊಡ್ಡದು: ಪ್ರೊ. ಕೆ.ಎಂ. ನಾಗರಾಜು
ರಾತ್ರಿ ಊಟ ಮುಗಿಸಿ ವಾಪಸ್ ಬರುವಾಗ ಕಾರಿಗೆ ನಾಯಿ ಅಡ್ಡಬಂದಿದೆ. ಅದಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಮುಂದಾದಾಗ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
























