ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಮನ್ವಯ ಸಂಸ್ಥೆಯ 20ನೇ ಸಂವತ್ಸರ ಸಂಭ್ರಮದ ಹಿನ್ನೆಲೆಯಲ್ಲಿ ಜುಲೈ 19ರಿಂದ ಮೂರು ದಿನ ಸಮನ್ವಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವೈವಿಧ್ಯಮಯ “ಸಮನ್ವಯ ಸಂಗಮ” ಎಂಬ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಸಮನ್ವಯಕಾಶಿ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರದ ಕುವೆಂಪು ರಂಗಮಂದಿರದಲ್ಲಿ ಜುಲೈ 19ರಂದು ಬೆಳಗ್ಗೆ 9.45ರಿಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಕಾರ್ಯಾಗಾರ “ಭರವಸೆಯ ಹೆಜ್ಜೆ” ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಸಮನ್ವಯ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.
ಭರವಸೆಯ ಹೆಜ್ಜೆ ಕಾರ್ಯಾಗಾರವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ, ಕರ್ನಾಟಕ ಹೌಸಿಂಗ್ ಬೋರ್ಡ್ ಆಯುಕ್ತ ಕೆ.ಎ.ದಯಾನಂದ್ ಉದ್ಘಾಟಿಸುವರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರಡ್ಡಿ, ಉಪವಿಭಾಗಾಧಿಕಾರಿ ಸತ್ಯನಾರಾಯಣ ಜಿ.ಎಚ್., ಅಮೃತ್ ನೋನಿ ವ್ಯವಸ್ಥಾಪಕ ನಿರ್ದೇಶಕ ಡಾ. ಶ್ರೀನಿವಾಸಮೂರ್ತಿ, ಕಟೀಲ್ ಅಶೋಕ್ ಪೈ ಸ್ಮಾರಕ ಸಮೂಹ ಶಿಕ್ಷಣ ಸಂಸ್ಥೆ ನಿರ್ದೇಶಕಿ ಡಾ. ರಜನಿ ಪೈ, ಡಿಡಿಪಿಯು ಚಂದ್ರಪ್ಪ ಎಸ್.ಗುಂಡಪಲ್ಲಿ ಉಪಸ್ಥಿತರಿರುವರು ಎಂದರು.
ಉದ್ಯಮಿ ವೆಂಕಟೇಶ್ ಎಸ್.ವಿ. ತರಬೇತುದಾರ ಸಾಧನಾ ಮಂಜುನಾಥ್, ಕೃಷಿಕ ದುರ್ಗಪ್ಪ ಅಂಗಡಿ ಹಾಗೂ ಕೆಎಪಿಎಂಸಿ ಪ್ರಾಂಶುಪಾಲೆ ಡಾ. ಸಂಧ್ಯಾಕಾವೇರಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವರು. ನಗರದ ಕುವೆಂಪು ರಂಗಮಂದಿರದಲ್ಲಿ ಜುಲೈ 20ರಂದು ಸಂಜೆ 5.30ರಿಂದ ಸಮನ್ವಯ ಸಂಗಮ 2025, ಗಾನ-ಸನ್ಮಾನ-ಸತ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮನ್ವಯ ಟ್ರಸ್ಟ್ ಮುನ್ನಡೆಸುತ್ತಿರುವ ಕೆ.ಎ.ದಯಾನಂದ ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಉಚಿತ ವಾಚನಾಲಯದ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮನ್ವಯ ಸಂಸ್ಥೆಯ ಜೊತೆಯಲ್ಲಿ 20 ವರ್ಷಗಳಲ್ಲಿ ಕೆಲಸ ಮಾಡಿರುವ ಮಹಾಪೆÇೀಷಕರು, ಪೆÇೀಷಕರು, ಸ್ವಯಂಸೇವಕರು ಪಾಲ್ಗೊಳ್ಳುವರು ಎಂದರು.
ನಗರದ ಸೋಮಿನಕೊಪ್ಪ ರಸ್ತೆಯ ಆರ್ಯವೈಶ್ಯ ಸಮುದಾಯ ಭವನದಲ್ಲಿ ಜುಲೈ 21ರಂದು ಸಂಜೆ 6ಕ್ಕೆ. ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮನ್ವಯ ಟ್ರಸ್ಟ್, ಶಿವಮೊಗ್ಗ ಜಿಲ್ಲಾ ಭಜನಾ ಪರಿಷತ್, ಆರ್.ಜಿ.ಸ್ಟೇಟರಿಂಗ್ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಮೈಸೂರಿನ ಶ್ರೀ ಅರ್ಜುನ ಅವಧೂತ ಮಹಾರಾಜರು, ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಹಾಗೆಯೇ ಶಿರಾಳಕೊಪ್ಪದ ಶ್ರೀ ಶಿವನಾಗ ಪಾರ್ಥ ಅವಧೂತರು ಉಪಸ್ಥಿತರಿರುವರು. ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಕೈಗಾರಿಕೋದ್ಯಮಿ ಎಸ್.ರುದ್ರೇಗೌಡ, ಅಬ್ದುಲ್ ಮುಜೀಬ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಪಾಲ್ಗೊಳ್ಳುವರು. ಸಮನ್ವಯ ಟ್ರಸ್ಟ್ ಅಧ್ಯಕ್ಷ ಕೆ.ಎಂ.ಗಿರಿಜಾದೇವಿ ಉಪಸ್ಥಿತರಿರುವರು. ಆರ್.ಜಿ.ಎಸ್.ಸೈಟರಿಂಗ್‍ನ ಅಧ್ಯಕ್ಷ ಗಣೇಶ್ ಅಧ್ಯಕ್ಷತೆ ವಹಿಸುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ನಂದಿನಿ, ಸ್ಮಿತಾ, ಯತೀಶ್, ವಿಜಯಕುಮಾರ್, ಗುಂಡಣ್ಣ (ಗಣೇಶ್), ಚಿರು, ಶಾಹೀದ್, ಸಂತೋಷ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post