ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಒಂದೇ ಕುಟುಂಬದ ಮೂವರು ವಿಷ ಸೇರಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕ್ಲಾರ್ಕ್ ಪೇಟೆಯಲ್ಲಿ ಇಂದು ನಡೆದಿದೆ.
ಮೃತರನ್ನು ಭುವನೇಶ್ವರಿ, ಮಾರುತಿ ಹಾಗೂ ದರ್ಶನ್ ಎಂದು ಗುರುತಿಸಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಭುವನೇಶ್ವರಿ ಹಾಗೂ ಅವರ ತಮ್ಮ ಹಾಗೂ ಮಗ ಸಾವನ್ನಪ್ಪಿದವರು ಇವರು ವಿಷ ಸೇವಿಸಿ ಕಳೆದ ಭಾನುವಾರವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Also read: ಯೋಜನೆಗಳಲ್ಲಿ ಹಣ ತೊಡಗಿಸಿದರೆ ಚಿನ್ನ ಖರೀದಿ ಬಲು ಸುಲಭ: ಶುಭ ಮರವಂತೆ ಅಭಿಪ್ರಾಯ
ವಿಜಯ್ ಗ್ಯಾರೇಜ್ ಬಳಿ ಇರುವ ಮನೆಯಲ್ಲಿ ಮೂವರು ವಿಷ ಸೇವಿಸಿದ್ದಾರೆ. ಇವರ ಮನೆಯ ಕಡೆಯಿಂದ ಯಾವುದೇ ಸಂಪರ್ಕ ಸಾಧ್ಯವಾಗದ ಹಿನ್ನೆಲೆಯಲ್ಲಿ ಸಂಬಂಧಿಕರೊಬ್ಬರು ಮನೆಯ ಬಳಿಗೆ ವಿಚಾರಿಸಲು ಬಂದಿದ್ದಾರೆ. ಈ ವೇಳೆ ಮೂವರು ಸಾವನ್ನಪ್ಪಿರುವ ವಿಷಯ ತಿಳಿದಿದೆ.
ದೊಡ್ಡಪೇಟೆ ಪೊಲೀಸ್ ಠಾಣೆ ಪೊಲೀಸರು ಆಗಮಿಸಿದ್ದು ಮಹಜರ್ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















