ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ #DCM DK Shivakumar ಅವರ 64ನೇ ಹುಟ್ಟುಹಬ್ಬದ ಅಂಗವಾಗಿ ಮೇ 15ರಂದು ಆಚರಿಸಲಾಗುವುದು ಎಂದು ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಬಳಗದ ಜಿಲ್ಲಾಧ್ಯಕ್ಷ ಆರ್.ಮೋಹನ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2001ರಲ್ಲಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘ ಪ್ರಾರಂಭಿಸಿದೆವು. ಅಂದಿನಿಂದ ಸಂಘವನ್ನು ಸದೃಡತೆ ಮತ್ತು ಕ್ರಿಯಾಶೀಲವಾಗಿ ಬೆಳೆಸುತ್ತ ಬಂದಿದ್ದೇವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ನಮಗೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹಿಸುತ್ತ ಬಂದಿದ್ದಾರೆ ಎಂದರು.

ಹಾಗೆಯೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಹಕ್ಕಿಪಿಕ್ಕಿ ಕ್ಯಾಂಪಿನ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 35 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಈ ವಿದ್ಯಾರ್ಥಿಗಳಿಗೆ ಬ್ಯಾಗ್, ಪುಸ್ತಕ ಮತ್ತು ಇನ್ನಿತರ ಪರಿಕರಗಳನ್ನು ನೀಡಲಾಗುವುದು ಎಂದರು.

Also read: ಆ ತಿಮಿಂಗಿಲ ಹಿಡೀರಿ, ಎಲ್ಲವೂ ಹೊರ ಬರುತ್ತೆ | ಎಚ್.ಡಿ. ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಭದ್ರಾವತಿ ಗಣೇಶ್, ಪ್ರಕಾಶ್, ಸಿದ್ದಪ್ಪ, ಲೋಕೇಶ್,ಶಂಕರನಾಯಕ, ದೇವೇಂದ್ರಪ್ಪ, ಸತ್ಯನಾರಾಯಣ ಮುಂತಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post