ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ನಮ್ಮ ನಾಡು ಪತ್ರಿಕೆಯ ವರದಿಗಾರ ಎಚ್.ಯು. ವೈದ್ಯನಾಥ್ ಆಯ್ಕೆಯಾಗಿದ್ದಾರೆ.
ಈ ಕುರಿತಂತೆ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಜಿಲ್ಲಾಧ್ಯಕ್ಷರಾಗಿ ವೈದ್ಯನಾಥ್, ಪ್ರಧಾನ ಕಾರ್ಯದರ್ಶಿಯಾಗಿ ದೂರದರ್ಶನ ಚಂದನ ವಾಹಿನಿಯ ವರದಿಗಾರ ಆರ್.ಎಸ್. ಹಾಲಸ್ವಾಮಿ ಆಯ್ಕೆಯಾಗಿದ್ದಾರೆ.
ಇನ್ನು, ರಾಜ್ಯ ಸಮಿತಿಯ ನಿರ್ದೇಶಕರಾಗಿ ನಮ್ಮ ನಾಡು ಪತ್ರಿಕೆಯ ಸಂಪಾದಕ ಕೆ.ವಿ. ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದೇ ವೇಳೆ, ಜಿಲ್ಲಾ ಸಮಿತಿಯ ನಿರ್ದೇಶಕ ಸ್ಥಾನಕ್ಕೆ ಶಿಕಾರಿಪುರದ ನಮ್ಮ ಕನ್ನಡ ನಾಡು ಪತ್ರಿಕೆಯ ರಾಜರಾವ್ ಎಂ. ಜಾದವ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ಚುನಾವಣಾಕಾರಿ ಶ್ರೀನಿವಾಸ್ ಅವರು ಘೋಷಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















