ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ದೈಹಿಕ ಸದೃಢತೆ ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ನೇತೃತ್ವದಲ್ಲಿ ಇಂದು ವಾಕ್ ಅಂಡ್ ರನ್ ನಡೆಸಲಾಯಿತು.
ನಗರದ ಗೋಪಾಳ ಪೋದಾರ್ ಶಾಲೆಯಿಂದ ನಡಿಗೆ ಮತ್ತು ಓಟ (Walk and Run) ವನ್ನು ಪ್ರಾರಂಭಿಸಿ ಪುರುದಾಳು ರಸ್ತೆ ಮುಖಾಂತರ ಪುರುದಾಳು ಚೆಕ್ ಡ್ಯಾಮ್ ನ ಹತ್ತಿರ ಬಂದು ಮುಕ್ತಾಯ ಮಾಡಲಾಯಿತು.
Also read: ವಕ್ಫ್ ಮಂಡಳಿ ಒತ್ತುವರಿ ಖಂಡಿಸಿ ರಾಜ್ಯದ ವಿವಿಧೆಡೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಈ ಸಂದರ್ಭದಲ್ಲಿ ಅನಿಲ್ ಕುಮಾರ್ ಭೂಮಾರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು -1 ಶಿವಮೊಗ್ಗ ಜಿಲ್ಲೆ, ಎ ಜಿ ಕಾರ್ಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು -2 ಶಿವಮೊಗ್ಗ ಜಿಲ್ಲೆ, ಕೃಷ್ಣ ಮೂರ್ತಿ ಪೊಲೀಸ್ ಉಪಾಧೀಕ್ಷಕರು, ಡಿಎಆರ್, ಶಿವಮೊಗ್ಗ, ಗಜಾನನ ವಾಮನ ಸುತಾರ ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ, ಗೋಪಾಲಕೃಷ್ಣ ಟಿ ನಾಯಕ್ ಪೊಲೀಸ್ ಉಪಾಧೀಕ್ಷಕರು, ಸಾಗರ ಉಪ ವಿಭಾಗ, ಕೇಶವ್ ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ, ನಾಗರಾಜ್ ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ, ಕೃಷ್ಣಮೂರ್ತಿ ಪೊಲೀಸ್ ಉಪಾಧೀಕ್ಷಕರು, ಸಿ ಇ ಎನ್ ಪೊಲೀಸ್ ಠಾಣೆ ಶಿವಮೊಗ್ಗ ಮತ್ತು ಶಿವಮೊಗ್ಗ ನಗರದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















