ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಕುಟುಂಬಕ್ಕೆ ಶೀಘ್ರ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ತಿಳಿಸಿದ್ದು, ಈ ವಿಚಾರವಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA S N Channabasappa ಹೊಗಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಸದನದಲ್ಲಿ ನಾನು ಮಾತಾಡಿದ್ದೆ ಆತ್ಮಹತ್ಯೆ ಮಾಡಿಕೊಂಡಿದ್ದ ಚಂದ್ರಶೇಖರ್ ಪತ್ನಿಯನ್ನು ಬೆಂಗಳೂರಿಗೆ ಕರೆಸಿ ಚೆಕ್ ನೀಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.
Also read: ಶಿವಮೊಗ್ಗ ದಸರಾ | 2 ಕೋಟಿ ರೂ. ಕೋರಿಕೆ, ಈ ಬಾರಿ ಏನೆಲ್ಲಾ ವಿಶೇಷ | ಶಾಸಕ ಚನ್ನಬಸಪ್ಪ ಹೇಳಿದ್ದೇನು?
ಮುಂದಿನ ಎರಡು ಮೂರು ದಿನದಲ್ಲಿ ಚಂದ್ರಶೇಖರ್ ಕುಟುಂಬಕ್ಕೆ ಪರಿಹಾರ ಕೊಡಲಾಗುತ್ತದೆ. ಕುಟುಂಬದ ಸದಸ್ಯನಿಗೆ ಸರ್ಕಾರಿ ಕೆಲಸ ನೀಡಲು ಸಹ ಮನವಿ ಮಾಡಿದ್ದೇನೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೂ ಸಹ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮೋಹನ್ ರೆಡ್ಡಿ, ವಿಶ್ವನಾಥ್, ಪ್ರಭಾಕರ್, ಆಶಾ ಚನ್ನಬಸಪ್ಪ, ಸುರೇಖಾ ಮುರಳೀಧರ್, ಅನಿತಾ ರವಿಶಂಕರ್, ಕಿರಣ್ ಮಂಜುನಾಥ್ ನವಿಲೆ, ಸಂಗೀತ, ಶ್ರೀನಾಗ್ ಮುಂತಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post