ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮೋಟಾರ್ ಸ್ವಿಚ್ ಹಾಕುವಾಗ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.
ಸುಮಾ (29) ಮೃತಪಟ್ಟ ಮಹಿಳೆಯಾಗಿದ್ದು, ಮೋಟಾರ್ ಸ್ವಿಚ್ ಹಾಕುವ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಏರುಪೇರಾದ ಹಿನ್ನಲೆಯಲ್ಲಿ ವಿದ್ಯುತ್ ಶಾಕ್‌ನಿಂದ ಸಾವು ಕಂಡಿದ್ದಾರೆ ಎನ್ನಲಾಗಿದೆ.

ನಗರದ ಹಳೇ ಜೈಲ್ ರಸ್ತೆಯ ಹೊಸನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ದೊಡ್ಡ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















