ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಈಸೂರು ಬಸವರಾಜ್ ಅವರು ಇಂದು ಮುಂಜಾನೆ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ರಾಜಕೀಯಕ್ಕಿಂತ ಸಮಾಜಸೇವೆಯನ್ನೇ ಮುಂದಿಟ್ಟುಕೊಂಡು ಸೇವೆ ಸಲ್ಲಿಸುತ್ತ ಜನಾನುರಾಗಿದ ಈಸೂರು ಬಸವರಾಜ್ ಅವರು ಸುಮಾರು ಹದಿನೈದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ಈಸೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ:
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾಗಿದ್ದ ಈಸೂರು ಬಸವರಾಜ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post