ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರ ಹೆಸರಿನಲ್ಲಿ ನಗರದ ಮೂವರು ಪ್ರಮುಖರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ಕೊರಿಯರ್ #Poisonous Sweet ಮೂಲಕ ರವಾನೆಯಾಗಿರುವ ಆತಂಕಕಾರಿ ಘಟನೆ ನಡೆದಿದ್ದು, ಈ ಕುರಿತಂತೆ ದೂರು ದಾಖಲಾಗಿದೆ.
ಈ ಕುರಿತಂತೆ ಮಾತನಾಡಿರುವ ಡಾ.ಧನಂಜಯ ಸರ್ಜಿ, ಎನ್’ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಡಾ. ಅರವಿಂದ್ ಹಾಗೂ ಡಾ. ಪವಿತ್ರ ಅವರಿಗೆ ತಮ್ಮ ಹೆಸರಿನಲ್ಲಿ ಸ್ವೀಟ್ ಬಾಕ್ಸ್ ರವಾನೆಯಾಗಿರುವುದು ತಿಳಿದುಬಂದಿದೆ ಎಂದಿದ್ದಾರೆ.
ತಮಗೆ ದೊರೆತ ಸ್ವೀಟ್ ಬಾಕ್ಸ್ ತೆರೆದ ಎನ್’ಇಎಸ್ ಕಾರ್ಯದರ್ಶಿ ನಾಗರಾಜ್ ಅವರು ಅದನ್ನು ಸ್ವಲ್ಪ ಸೇವಿಸಿದ್ದು, ಅದು ಕಹಿಯಾಗಿರುವುದು ಕಂಡು ಬಂದಿದೆ. ತಕ್ಷಣವೇ ಅವರು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರ ಗಮನಕ್ಕೆ ತಂದಿದ್ದರು. ಈ ಬಗ್ಗೆ ಅರುಣ್ ತಮ್ಮ ಗಮನಕ್ಕೆ ತಂದ ನಂತರವಷ್ಟೆ, ತಮಗೆ ಮಾಹಿತಿ ಗೊತ್ತಾಗಿತ್ತು. ತದನಂತರ ಇತರೆ ಇಬ್ಬರು ವೈದ್ಯರಿಗೆ ಇದೇ ಮಾದರಿಯ ಸ್ವೀಟ್ ಬಾಕ್ಸ್ ರವಾನೆಯಾಗಿರುವುದು ತಿಳಿದುಬಂದಿತ್ತು ಎಂದಿದ್ದಾರೆ.
ಈ ಸ್ವೀಟ್ ಬಾಕ್ಸ್’ನಲ್ಲಿ ತಮ್ಮ ಹೆಸರು ಹಾಗೂ ಭಾವಚಿತ್ರ ಮುದ್ರಿಸಿರುವ ನಕಲಿ ಪತ್ರ ಇರಿಸಿರುವುದು ಕಂಡುಬಂದಿದೆ. ಯಾರೋ ಉದ್ದೇಶಪೂರ್ವಕವಾಗಿಯೇ ಈ ದುಷ್ಕೃತ್ಯ ಎಸಗಿದ್ದಾರೆ. ಆರೋಪಿಗಳು ಯಾರು ಎಂಬುದು ಪತ್ತೆ ಮಾಡಿ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಈ ವಿಷಯುಕ್ತ ಸ್ವೀಟ್ ಮಾದರಿಯನ್ನು ಹೆಚ್ಚಿನ ತಪಾಸಣೆಗಾಗಿ, ಪ್ರಯೋಗಾಲಯದ ಪರೀಕ್ಷೆಗೆ ರವಾನಿಸಲಾಗಿದೆ. ಸ್ವೀಟ್’ಗೆ ಏನು ಮಿಶ್ರಣ ಮಾಡಲಾಗಿದೆ ಎಂಬುವುದು ಇನ್ನಷ್ಟೆ ತಿಳಿದುಬರಬೇಕಾಗಿದೆ.
ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post