ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗವು ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದ್ದು ಸಾರ್ವಜನಿಕರು ಇದನ್ನು ಬಳಕೆ ಮಾಡಿಕೊಂಡು ಪಾರದರ್ಶಕ ಚುನಾವಣೆ ನಡೆಸುವಲ್ಲಿ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ DC Selvamani ತಿಳಿಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ವಿವಿಧ ಪಕ್ಷಗಳು ಮತಗಳನ್ನು ಸೆಳೆಯಲು ಮತದಾರರಿಗೆ ಹಣ, ಹೆಂಡ ಹಾಗೂ ಇತರೆ ಆಸೆ, ಆಮಿಷ ತೋರಿಸುವುದು ಸಹಜ. ಇಂತಹ ಚುನಾವಣಾ ಅಕ್ರಮಗಳ ತಡೆಗೆ ಸಿವಿಜಿಲ್ ಆ್ಯಪ್ ಬಿಡುಗಡೆಗೊಳಿಸಲಾಗಿದ್ದು, ಸಿವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಅಕ್ರಮವನ್ನು ತಮ್ಮ ಮೊಬೈಲ್‍ಗಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು. ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯವಾಗಿ ಇಡುವ ಭರವಸೆಯನ್ನು ಕೂಡ ಆಯೋಗ ನೀಡಿದೆ.

Also read: ಗಮನಿಸಿ! ಎಪ್ರಿಲ್ 30ರೊಳಗೆ ಆಸ್ತಿ ತೆರಿಗೆ ಪಾವತಿಸಿ ಶೇ.5ರಷ್ಟು ರಿಯಾಯ್ತಿ ಪಡೆಯಿರಿ
ಸ್ಮಾರ್ಟ್ ಫೆÇೀನ್ ನ ಗೂಗಲ್ ಪ್ಲೇ ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್‍ಲೋಡ್ ಮಾಡ್ಕೊಂಡು ಅತ್ಯಂತ ಸುಲಭವಾಗಿ ಇದನ್ನು ಬಳಸಬಹುದಾಗಿದೆ. ಅಕ್ರಮದ ಕುರಿತಾದ ಫೆÇೀಟೋ ಅಥವಾ ವಿಡಿಯೋ ಗಳನ್ನು ಅಪ್‍ಲೋಡ್ ಮಾಡಿ ದೂರು ನೀಡಬಹುದು. ಆ್ಯಪ್ ತಮ್ಮ ಸ್ವವಿವರ ನೀಡಿಯಾದರೂ, ಅಥವಾ ನೀಡದೆಯೂ ದೂರು ನೀಡಬಹುದು. ಆ್ಯಪ್ ನಲ್ಲಿ ತಿಳಿಸಿದ 16 ರೀತಿಯ ದೂರುಗಳ ಪೈಕಿ ಒಂದನ್ನು ಸೆಲೆಕ್ಟ್ ಮಾಡಿ ಸೆಂಡ್ ಮಾಡಬಹುದು. ದೂರು ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಡಲಾಗುವುದು.

ಸಾರ್ವಜನಿಕರು ಸಿವಿಜಿಲ್ ಮಾತ್ರವಲ್ಲದೇ ಉಚಿತ ಸಹಾಯವಾಣಿ 1950 ಕ್ಕೆ ಸಹ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.











Discussion about this post