ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ತಾಲೂಕು ಹೊಸಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂದಿರಾನಗರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕರ್ನಾಟಕ ಪರಿಸರ ರ ತ್ನ ಪ್ರಶಸ್ತಿ ಪುರಸ್ಕೃತ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಆಡಳಿತ) ಮಲ್ಲಿಕಾರ್ಜುನ್ ರವರ ನೇತೃತ್ವದಲ್ಲಿ ಶ್ರಮಾದಾನ ಕಾರ್ಯಕ್ರಮ ನಡೆಯಿತು.
ಶಾಲೆಗೆ ಸುಣ್ಣ-ಬಣ್ಣ ಬಳಿಯುವುದು, ಮಹಿಳಾ ಸಬಲೀಕರಣ ಉದ್ದೇಶದಿಂದ ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಗು ಜನನವಾದ ಕುಟುಂಬದವರಿಂದ 25 ಸಸಿಗಳನ್ನು ನೆಡುವ ಕಾರ್ಯಕ್ರಮ ಹಾಗೂ ಶಾಲಾ ಆವರಣ ಸ್ವಚ್ಛತೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಪರಿಸರ ತಂಡದ ಸದಸ್ಯರೊಂದಿಗೆ ಹೊಸಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
Also read: ನಮ್ಮೊಳಗಿನ ಅಮ್ಮನ ಅನುಭೂತಿಯ ಮೂರ್ತರೂಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post