ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ತಾಲ್ಲೂಕು ಯಲವಟ್ಟಿ ಗ್ರಾಮದಲ್ಲಿ ನಿರ್ಮಾಣ ಮಾಡಿರುವ ನೂತನ “ಶ್ರೀ ಪಾರ್ವತಿ ಪರಮೇಶ್ವರ ಸಮುದಾಯ ಭವನ”ವನ್ನು ಆನಂದಪುರ ಬೆಕ್ಕಿನ ಕಲ್ಮಠದ ಪೀಠಾಧ್ಯಕ್ಷ ಮನ್ಮಹರಾಜ ನಿರಂಜನ ಜಗದ್ಗುರು ಡಾ. ಶ್ರೀ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ದೇವಸ್ಥಾನ ಸಮಿತಿ ಅಧ್ಯಕ್ಷರಾದ ಪರಮೇಶ್ವರಪ್ಪ, ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಭಾನುಪ್ರಕಾಶ್, ವಿಧಾನ ಪರಿಷತ್ ಶಾಸಕ ಅಯನೂರು ಮಂಜುನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಅಂಬಿಕಾ ಅವರು ಹಾಗೂ ಗ್ರಾಮದ ಹಲವಾರು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post