ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶ್ರೀ ಭಗವದ್ಗೀತಾ ಅಭಿಯಾನ #Shri Bhagavadgeetha Abhiyana ಕರ್ನಾಟಕ, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ, ಸ್ವರ್ಣರಶ್ಮೀ ಟ್ರಸ್ಟ್ ಶಿವಮೊಗ್ಗದ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ-2025ನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನ ಸಮಿತಿಯ ಗೌರವ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಶ್ರೀಗಳಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳ ಸಂಕಲ್ಪದಂತೆ ಇಡೀ ರಾಜ್ಯದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ ನಡೆಯುತ್ತಿದೆ. ಶಿವಮೊಗ್ಗದಲ್ಲಿಯೂ ಕೂಡ ಅಭಿಯಾನದ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಾಗಿ ಶ್ರೀ ಭಗವದ್ಗೀತೆ 11ನೇ ಅಧ್ಯಾಯದ ಪಠಣ ಆರಂಭವಾಗಿದೆ ಎಂದರು.

ವಿಶ್ವರೂಪ ದರ್ಶನದ 11ನೇ ಅಧ್ಯಾಯದ ಎಲ್ಲಾ ಶ್ಲೋಕಗಳನ್ನು ಮಕ್ಕಳಿಗೆ ಹೇಳಿಕೊಡಲಾಗುತ್ತಿದೆ. ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವವರು 11ನೇ ಅಧ್ಯಾಯದ ಎಲ್ಲಾ ಶ್ಲೋಕಗಳನ್ನು ಕಂಠಪಾಠ ಮಾಡಬೇಕು. 5 ನಿಮಿಷದ ಅವಧಿಯೊಳಗೆ ನಿರ್ಣಾಯಕರು ಸೂಚಿಸುವ ಯಾವುದೇ 10 ಶ್ಲೋಕಗಳನ್ನು ಅನುಕ್ರಮವಾಗಿ ಹೇಳಬೇಕು. ಹಾಗೆಯೇ ಭಾಷಣಸ್ಫರ್ಧೆಯನ್ನು ಕೂಡ ಮೂರು ವಿಭಾಗಗಳಲ್ಲಿ ಹಮ್ಮಿಕೊಳ್ಳಲಾಗುವುದು. ತಾಲ್ಲೂಕು ಮಟ್ಟದ ಸ್ಪರ್ಧೆಗಳು ನ.22ರೊಳಗೆ, ಜಿಲ್ಲಾ ಮಟ್ಟದ ಸ್ಪರ್ಧೆಗಳು ನ.25ರೊಳಗೆ ನಡೆಯಲಿದೆ. ರಾಜ್ಯಮಟ್ಟದ ಸ್ಫರ್ಧೆ ನ.29ರಂದು ನಡೆಯಲಿದೆ ಎಂದರು.

ನ.30ರಂದು ಮಹಾಸಮರ್ಪಣೆ
ನ.30ರಂದು ಶಿವಮೊಗ್ಗ ಫ್ರೀಡಂಪಾರ್ಕ್‍ನಲ್ಲಿ ಅಭಿಯಾನದ ಮಹಾ ಸಮರ್ಪಣೆ ನಡೆಯಲಿದೆ. ಮಹಾಸಮರ್ಪಣೆ ಕಾರ್ಯಕ್ರಮವನ್ನು ಸಧ್ಯಕ್ಕೆ ಫ್ರೀಡಂಪಾರ್ಕ್‍ನಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಸುಮಾರು 15 ಸಾವಿರ ಮಕ್ಕಳು ಸೇರಿದಂತೆ 25 ಸಾವಿರ ಜನರು ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಅಭಿಯಾನದ ಅಧ್ಯಕ್ಷ ಡಿ.ಎಸ್. ಅರುಣ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಅಶೋಕ್ ಜಿ. ಭಟ್, ಲಕ್ಷ್ಮೀ ನಾರಾಯಣ ಕಾಶಿ, ಮೋಹನ್ ಜಾದವ್, ಮ.ಸ. ನಂಜುಂಡಸ್ವಾಮಿ, ಡಿ.ಎಂ. ಹೆಗಡೆ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post