ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ #Shri Mylaralingeshwara Karnikothsava ಪ್ರಯುಕ್ತ ಫೆ.5ರಿಂದ 11ರವರೆಗೆ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು ಹರಿಸಲು ಆದೇಶಿಸಲಾಗಿದೆ.
ಪ್ರಾದೇಶಿಕ ಆಯುಕ್ತರ ಆದೇಶದನ್ವಯ ಫೆ.5ರ ರಾತ್ರಿ 100 ಕ್ಯೂಸೆಕ್ಸ್ ಮತ್ತು ದಿ: ಫೆ.ರಿಂದ 11ರವರೆಗೆ ಪ್ರತಿದಿನ 800 ಕ್ಯೂಸೆಕ್ಸ್ನಂತೆ ಒಟ್ಟು 5800 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಭದ್ರಾ ನದಿಗೆ ಹರಿಸಲಾಗುವುದು.
Also read: ಶಿಳ್ಳೇಕ್ಯಾತ ಸಮುದಾಯದ ವಿಕಾಸಕ್ಕೆ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸಿ
ಮೇಲೆ ತಿಳಿಸಿದ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್ ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕನೀನಿನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಆರ್ ರವಿಚಂದ್ರ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post