ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ಪ್ರಪ್ರಥಮ ಬಾರಿಗೆ ವಿಶ್ವದಾದ್ಯಂತ ಆಚರಣೆಗೆ ತಂದ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವವನ್ನು ಸೆ.23ರಂದು ಶ್ರೀ ವೀರಶೈವ ಕಲ್ಯಾಣ ಮಂದಿರದ ಹಿಂಭಾಗದ ಚೌಕಿಮಠದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಬೆಳಗ್ಗೆ 7ಗಂಟೆಗೆ ಕೇದಾರ ಪೀಠದ ಶ್ರೀ ಹಿಮವತ್ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ 1008 ಜಗದ್ಗುರು ಕೇದಾರನಾಥ ರಾವಲ್ ಪದವಿ ಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರಿಂದ ಸಂಗೀತಯುಕ್ತ ಇಷ್ಟಲಿಂಗ ಪೂಜೆ ಹಾಗೂ 11ರಿಂದ ಧರ್ಮಸಭೆಯೊಂದಿಗೆ ಆಯೋಜಿಸಲಾಗಿದೆ.
ಜಗಳೂರು ಕಣ್ಣುಕುಪ್ಪೆಯ ಶ್ರೀ ಷ. ಬ್ರ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಚನ್ನಗಿರಿ ಹಿರೇಮಠದ ಶಿವಾಚಾರ್ಯ ಸ್ವಾಮಿಗಳು, ಮಳಲಿ ಸಂಸ್ಥಾನ ಮಠ ರಂಭಾಪುರಿ ಶಾಖಾ ಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಗಳು, ಬಿಳಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು, ತೊಗರ್ಸಿ ಪಂಚವಣ್ಣಿಗೆ ಮಠದ ಶ್ರೀ ಚನ್ನವೀರ ದೇಶಿಕೇಂದ್ರ ಸ್ವಾಮಿಗಳು ನೇತೃತ್ವ ವಹಿಸುವರು ಎಂದರು.
Also read: Those whose roots are from India don’t consider women weak: Amit Shah
ವೀರಶೈವ ಕಲ್ಯಾಣ ಮಂದಿರದ ಗೌರವ ಕಾರ್ಯದರ್ಶಿ ಎನ್.ಜೆ. ರಾಜಶೇಖರ್ ಮಾತನಾಡಿ, ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸಲಿದ್ದು, ಲಿಂಗಾಯತ ಸಂಘಟನಾ ವೇದಿಕೆ ಅಧ್ಯಕ್ಷ ಜಿ.ಶಿವರಾಜ್ ಅಧ್ಯಕ್ಷತೆ ವಹಿಸುವರು. ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಪ್ರಾಸ್ತಾವಿಕ ಮಾತನಾಡುವರು ಎಂದರು.
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವೈದ್ಯಕೀಯ ಘಟಕದ ರಾಷ್ಟ್ರೀಯ ಉಪಾಧ್ಯಕ್ಷ ಡಾ. ಧನಂಜಯ ಸರ್ಜಿ ಮಾತನಾಡಿ, ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ್ರು, ಶಾಸಕರಾದ ಬಿ.ಕೆ. ಸಂಗಮೇಶ್, ಬಿ.ವೈ. ವಿಜಯೇಂದ್ರ, ಎಸ್.ಎನ್. ಚನ್ನಬಸಪ್ಪ, ಮಾಜಿ ಶಾಸಕರಾದ ಆಯನೂರು ಮಂಜುನಾಥ್, ಹೆಚ್. ಎಂ. ಚಂದ್ರಶೇಖರಪ್ಪ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್ ಕಂಕಣವಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ, ಮಧ್ಯ ಕರ್ನಾಟಕ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಅಧ್ಯಕ್ಷರಾದ ಸಿ.ಪಿ. ಈರೇಶ್ ಗೌಡ್ರು, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಗೌರಮ್ಮ ಷಡಕ್ಷರಿ ಮುಖ್ಯ ಅತಿಥಿಗಳಾಗಿ ಹಾಗೂ ವಿಶೇಷ ಆಹ್ವಾನಿತರಾಗಿ ಖ್ಯಾತ ಚಲನಚಿತ್ರ ನಟ ಡಾಲಿ ಧನಂಜಯ್, ನಟಿ ಅಧಿತಿ ಪ್ರಭುದೇವ್ ಭಾಗವಹಿಸುವರು ಎಂದರು.
ವೇದಿಕೆಯ ತಾಲೂಕು ಅಧ್ಯಕ್ಷ ಧನರಾಜ್ ಮಾತನಾಡಿ, ನಮ್ಮ ಸಂಘಟನೆಯು ಕಳೆದ ಐದು ವರ್ಷಗಳಿಂದ ವೀರಶೈವ ಸಮಾಜದ ಎಲ್ಲಾ ಒಳಪಂಗಡಗಳು ಒಂದೇ ಎಂಬ ಭಾವದೊಂದಿಗೆ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದೇವೆ.
ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮಸಭೆ ಇರುತ್ತದೆ. ಈ ಇಷ್ಟಲಿಂಗ ಪೂಜಾ ಕಾರ್ಯಕ್ರಮವು ಬೆಳಿಗ್ಗೆ 7-30ರಿಂದ 12-30ರವರೆಗೆ ನಡೆಯಲಿದೆ. ಇದರ ವಿಶೇಷವೆಂದರೆ ಇದು ಸಂಗೀತಯುಕ್ತ ಇಷ್ಟಲಿಂಗ ಪೂಜೆಯಾಗಿದೆ. ಸಭೆಯ ನಂತರ ಅನ್ನಸಂತರ್ಪಣೆ ಇರುತ್ತದೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಸಮುದಾಯದವರು ಆಗಮಿಸಬೇಕು ಎಂದು ಕೋರಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post