ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಕಾರಿಪುರ ತಾಲ್ಲೂಕು ಗಾಮ ಗ್ರಾಮದಲ್ಲಿ ಡಿ.14ರಿಂದ ಡಿ.20ರವರೆಗೂ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ #Shri Veerabhadreshwara Swamy Chariot ಹಾಗೂ ಜಂಗಿಕುಸ್ತಿ ಕಾರ್ಯಕ್ರಮಗಳು ನಡೆಯಲಿದೆ.
ಗಾಮದ ಶ್ರೀವೀರಭದ್ರೇಶ್ವರ ಸ್ವಾಮಿಯ ರಥೋತ್ಸವದ ಅಂಗವಾಗಿ ಡಿ.14ರ ಭಾನುವಾರ ರಾತ್ರಿ 9.30ರಿಂದ ಕಂಕಣ ಧಾರಣೆ ನಡೆಯಲಿದ್ದು, ಡಿ.15ರ ಸುಮಾರು ರಾತ್ರಿ ಹೂವಿನ ರಥೋತ್ಸವ ಹಾಗೂ ಡಿ.16 ಶ್ರೀವೀರಭದ್ರೇಶ್ವರ ಸ್ವಾಮಿಯ ರಥೋತ್ಸವ ನಡೆಯಲಿದೆ. ಡಿ.17ರಂದು ಓಕುಳಿ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಮಧ್ಯಾಹ್ನ 12ರಿಂದ ಅನ್ನಸಂತರ್ಪಣೆ ಆಯೋಜಿಸಲಾಗಿದೆ.
ಡಿ.17ರ ಬುಧವಾರ ಬೆಳಿಗ್ಗೆ 9ರಿಂದ ರಥೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸಾಂಸ್ಕøತಿಕ ಕಲಾ ಮೇಳಗಳು ಭಾಗವಹಿಸಲಿವೆ. ಅಂದು ರಾತ್ರಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ನಡೆಯಲಿದೆ. ಡಿ.18ರಂದು ರಾತ್ರಿ 8ಕ್ಕೆ ರಸಮಂಜರಿ ಕಾರ್ಯಕ್ರಮ, ಡಿ.19ರ ರಾತ್ರಿ 8ಕ್ಕೆ ಆರ್ಕೆಸ್ಟ್ರಾ ಮತ್ತು ರಸಮಂಜರಿ ಕಾರ್ಯಕ್ರಮಗಳು ನಡೆಯಲಿವೆ. ಡಿ.18ರಿಂದ ಡಿ.20ರವರೆಗೆ ಮೂರು ದಿನಗಳ ಕಾಲ ಬಾರೀ ಜಂಗಿ ಕುಸ್ತಿಯನ್ನು ಏರ್ಪಡಿಸಲಾಗಿದೆ.
ರಥೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಿಕಾರಿಪುರ ಶಾಸಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್, ಶಿಕಾರಿಪುರ ತಾಲ್ಲೂಕು ದಂಡಾಧಿಕಾರಿ ಮಂಜುಳ ಶಂಕರ್ ಬಜಂತ್ರಿ, ಗಾಮ ಗ್ರಾ.ಪಂ. ಅಧ್ಯಕ್ಷೆ ರೇಣುಕಮ್ಮ ನಾಗರಾಜಪ್ಪ ಸೇರಿದಂತೆ ಗ್ರಾ.ಪಂ. ಸದಸ್ಯರು ಹಾಗೂ ದೇವಸ್ಥಾನ ಸಮಿತಿಯವರು ಹಾಗೂ ಗ್ರಾಮಸ್ಥರು ಈ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















