ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಅವರು ಸಾಹಿತಿ, ಅಂಕಣಕಾರ್ತಿ ಶ್ರೀರಂಜನಿ ದತ್ತಾತ್ರಿಯವರನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.
ಶ್ರೀರಂಜನಿ ದತ್ತಾತ್ರಿಯವರು ಈ ಹಿಂದಿನ ಅವಧಿಯಲ್ಲಿ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸಂಘಟನಾ ಕಾರ್ಯದರ್ಶಿಗಳಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಕಾರಣ ಸಂದಗೌರವ ಇದಾಗಿದೆ. ಕಳೆದ ಬಾರಿ ಜಿಲ್ಲೆಯ ಪ್ರತಿ ತಾಲ್ಲೂಕುಗಳನ್ನು ಸುತ್ತುತ್ತಾ ಕನ್ನಡದ ಕಾರ್ಯಕ್ರಮಗಳ ಆಯೋಜನೆಯ ಮೂಲಕ ಕನ್ನಡ ಪ್ರತಿ ಗ್ರಾಮಗಳಿಗೂ ತಲುಪಿಸಲು ಕಾರ್ಯಕರ್ತರೊಂದಿಗೆ ನಿರಂತರವಾಗಿ ಶ್ರಮಿಸಿದ್ದಾರೆ.
ಡಿ.ಬಿ.ಶಂಕರಪ್ಪ ಅಭಿನಂದನೆ:
ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಶ್ರೀಮತಿ ಶ್ರೀರಂಜನಿ ದತ್ತಾತ್ರಿ ಯವರನ್ನು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ನಿಕಟಪೂರ್ವ ಅಧ್ಯಕ್ಷ ಡಿ.ಬಿ. ಶಂಕರಪ್ಪ ಅಭಿನಂದಿಸಿದ್ದಾರೆ.
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಶ್ರಮವಹಿಸಿ ಜಿಲ್ಲೆಯ ಎಲ್ಲಾ ಕಡೆಗಳಲ್ಲಿಯೂ ಓಡಾಟ ಮಾಡಿ ಸಂಘಟಿಸಿದ ರಂಜಿನಿ ದತ್ತಾತ್ರಿಯವರಿಗೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾಕಾರ್ಯದರ್ಶಿ ಸ್ಥಾನ ಸಿಕ್ಕಿದ್ದು ಬಹಳ ಸಂತಸ ತಂದಿದೆ. ನಾಡೋಜ ಡಾ. ಮಹೇಶ್ ಜೋಷಿಯವರಿಗೆ ಗೌರವಪೂರ್ವಕವಾಗಿ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರ ಪರವಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post