No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿದ್ದೇಶ್ವರ ಶ್ರೀಗಳ ಸಿದ್ಧಾಂತದ ಶೇ. 0.1ದನ್ನಾದರೂ ಅಳವಡಿಸಿಕೊಳ್ಳೋಣ: ಶಾಸಕ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 5, 2023
in ಶಿವಮೊಗ್ಗ
0
ಸಿದ್ದೇಶ್ವರ ಶ್ರೀಗಳ ಸಿದ್ಧಾಂತದ ಶೇ. 0.1ದನ್ನಾದರೂ ಅಳವಡಿಸಿಕೊಳ್ಳೋಣ: ಶಾಸಕ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಿದ್ದೇಶ್ವರ ಶ್ರೀಗಳನ್ನು ಕಳೆದುಕೊಂಡು ಇಡೀ ದೇಶ ಬಡವಾಗಿದೆ. ಸರಳತೆಯ ಸಂತ ನಡೆದಾಡುವ ದೇವರನ್ನು ಕಳೆದುಕೊಂಡಿದ್ದೇವೆ. ನಮ್ಮ ಜೀವನದಲ್ಲಿ ಅವರ ತತ್ವ ಸಿದ್ಧಾಂತದ 0.1 ಶೇ.ವನ್ನಾದರೂ ಅಳವಡಿಸಿಕೊಳ್ಳೋಣ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ.

ಅವರು ಇಂದು ನಗರದ ಬಿಜೆಪಿ ಕಛೇರಿಯಲ್ಲಿ ದಿ.ಶ್ರೀ ಸಿದ್ದೇಶ್ವರ ಸ್ವಾಮೀಜಿಯವರಿಗೆ ಶ್ರದ್ಧಾಂಜಲಿ ಅರ್ಪಿಸಿ ನುಡಿ ನಮನ ಸಲ್ಲಿಸಿದರು.

1992ರಲ್ಲಿ ನಾನು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನಾಗಿದ್ದಾಗ ಸಿದ್ದೇಶ್ವರ ಸ್ವಾಮೀಜಿಗಳ ದರ್ಶನಕ್ಕೆ ಹೋಗಿದ್ದೆ. ಬೆಳಿಗ್ಗೆ 6 ಗಂಟೆಗೆ ಸರಿಯಾಗಿ ಅವರ ಪ್ರವಚನ ಪ್ರಾರಂಭವಾಗಿ 7 ಗಂಟೆಗೆ ಮುಗಿಯುತ್ತದೆ. ದೊಡ್ಡ ಮೈದಾನದಲ್ಲಿ ಯಾವುದೆ ಪ್ರಚಾರ ಮಾಡದೆ ಸಾವಿರಾರು ಭಕ್ತರು ಸೇರಿದ್ದರು. ಇಡೀ ವಾತಾವರಣದಲ್ಲಿ ಒಂದು ಗಂಟೆ ಕಾಲ ಪಿನ್‌ಡ್ರಾಪ್ ಸೈಲೆನ್ಸ್ ಇತ್ತು. ಅವರ ಪ್ರವಚನವನ್ನು ಶಿವಮೊಗ್ಗಕ್ಕೆ ಶ್ರೀಗಂಧ ಸಂಸ್ಥೆಯ ಮೂಲಕ ಉಣಬಡಿಸುವ ಸೌಭಾಗ್ಯ ನನಗೆ ಸಿಕ್ಕಿತ್ತು. ಅದಕ್ಕು ಮುನ್ನ ಪ್ರವಚನಕ್ಕೆ ಬರಲು ಆಹ್ವಾನಿಸಿದಾಗ ಅದಾಗಲೇ 3 ವರ್ಷಗಳ ಕಾಲ ಎಲ್ಲಾ ದಿನಗಳು ಮೊದಲೇ ಕಾಯ್ದಿರಿಸಲಾಗಿತ್ತು. ಅದೃಷ್ಟವಶಾತ್ ಒಂದು ವಾರದ ಪ್ರವಚನ ರದ್ಧಾಗಿದ್ದ ಕಾರಣ ಆ ಭಾಗ್ಯ ನಮ್ಮ ಶಿವಮೊಗ್ಗದ ಜನರಿಗೆ ಸಿಕ್ಕಿತು ಎಂದರು.
ಯಾವುದೇ ಆಡಂಬರವಿಲ್ಲ ಭಕ್ತರನ್ನು ಆಯಸ್ಕಾಂತದಂತೆ ಸೆಳೆದು ಅವರ ಮನಸ್ಸಿಗೆ ನಾಟುವಂತೆ ಅವರ ಆಧ್ಯಾತ್ಮ ಚಿಂತನೆಯನ್ನು ತಿಳಿಸುವ ರೀತಿಗೆ ಭಕ್ತ ಸಮೂಹ ಅವರನ್ನು ದೇವರೆಂದೆ ಭಾವಿಸಿ ಬರುತ್ತಿದ್ದರು. ಈಡೀ ಉಪನ್ಯಾಸದಲ್ಲಿ ದೇಶ, ಧರ್ಮ, ಮಾನವೀಯತೆ ಪದಗಳು ತುಂಬಿ ಹೋಗಿರುತ್ತಿತ್ತು. ವೈಯಕ್ತಿಕ ಶಿಸ್ತು, ಸರಳತೆ, ಆಡಂಭರವಿಲ್ಲದ ಜೀವನ ಜನರಿಗೂ ಪಾಠವಾಗಿತ್ತು. ಪ್ರಶಸ್ತಿಗಳನ್ನು ಅಪೇಕ್ಷೆಪಟ್ಟು ಪಡೆಯುತ್ತಿರುವ ಈ ದಿನಗಳಲ್ಲಿ ಕೇಂದ್ರ,ರಾಜ್ಯ ಹಾಗೂ ವಿಶ್ವವಿದ್ಯಾಲಯಗಳು ಯಾವುದೇ ಪ್ರಶಸ್ತಿ ನೀಡಿದರೂ ಕೂಡ ನಾನು ಅದಕ್ಕೆ ಅರ್ಹನಲ್ಲ ಎಂದು ಒಮ್ಮೆ ಯೋಚಿಸಿ ಎಂದು ಹೇಳಿ ನಯವಾಗಿ ತಿರಸ್ಕರಿಸುತ್ತಿದ್ದರು.

ಶರ್ಟ್‌ಗೆ ಜೇಬಿಲ್ಲ, ಕಾಲಿಗೆ ಚಪ್ಪಲಿ ಹಾಕಲ್ಲ, ದುಡ್ಡು ಮುಟ್ಟಲ್ಲ ಆದರೂ ಕೂಡ ಅವರ ಆಶ್ರಮದಲ್ಲಿ ನಿರಂತರವಾಗಿ ಭಕ್ತಾದಿಗಳೇ ಅವರ ಖರ್ಚಿನಲ್ಲಿ ದಾಸೋಹ ನಡೆಸುತ್ತಿದ್ದರು. ಸ್ವಾಭಾವಿಕವಾಗಿ ಸ್ಥಾನಮಾನಗಳು ಬಂದಾಗ ಮನುಷ್ಯನಿಗೆ ಸೊಕ್ಕು ಬರುತ್ತದೆ. ಆದರೆ ಕೋಟ್ಯಾಂತರ ಭಕ್ತರನ್ನು ಹೊಂದಿದ್ದ ಅವರಿಗೆ ಯಾವುದೇ ಆಸೆ ಆಕಾಂಕ್ಷೆಗಳು ಇರಲಿಲ್ಲ. ಯಾವುದೇ ಮೋಹಕ್ಕೆ ಒಳಗಾಗಲಿಲ್ಲ. ವಿದ್ಯಾಸಂಸ್ಥೆಗಳನ್ನು ಕಟ್ಟಲಿಲ್ಲ. ಆದರೆ ಜನರನ್ನು ವಿದ್ಯಾವಂತರನ್ನಾಗಿ ಮಾಡಿದರು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ಈ ದೇಶವೇ ಆಧ್ಯಾತ್ಮದ ತಳಹಾದಿಯಲ್ಲಿ ನಿಂತಿದೆ. ತಮ್ಮದೇ ಶೈಲಿಯಲ್ಲಿ ಸಮಾಜದಲ್ಲಿ ಕ್ರಾಂತಿ ಮಾಡಿದವರು. ಬುದ್ಧ, ಬಸವ, ಶಂಕರ, ಮಧ್ವರ, ರಾಮಾನುಜರ ಸಾಲಿಗೆ ಸೇರಿದ ಶತಮಾನದ ಸಂತರು. ಶರಣರ ಸಾವನ್ನು ಮರಣದಲ್ಲಿ ನೋಡು ಎನ್ನುವಂತೆ ಅವರು ನಿಧನರಾದಾಗ ರಾಜ್ಯದ ಇತಿಹಾಸದಲ್ಲಿ ಹಿಂದೆಂದೂ ಕಂಡು ಕೇಳರಿಯದ ಜನಸಾಗರ ನೆರೆದಿದ್ದೆ ಸಾಕ್ಷಿ. ನುಡಿದಂತೆ ನಡೆದ ದಾರ್ಶನಿಕ ಎಂದರು.

ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ಜ್ಞಾನೇಶ್ವರ್, ಮೋಹನ್‌ರೆಡ್ಡಿ, ಸಂತೋಷ್ ಬಳ್ಳಕೆರೆ, ಮಾಜಿ ಮೇಯರ್ ಸುನೀತಾ ಅಣ್ಣಪ್ಪ, ಸುವರ್ಣಶಂಕರ್, ಸುರೇಖಾ ಮುರುಳೀಧರ್ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share219Tweet123Send
Previous Post

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ 2024ರಲ್ಲಿ ಲೋಕಾರ್ಪಣೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

Next Post

ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಇತರ ಕೌಶಲ್ಯಗಳಲ್ಲೂ ಪರಿಣತಿ ಹೊಂದಬೇಕು: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಇತರ ಕೌಶಲ್ಯಗಳಲ್ಲೂ ಪರಿಣತಿ ಹೊಂದಬೇಕು: ಸಂಸದ ರಾಘವೇಂದ್ರ

ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಇತರ ಕೌಶಲ್ಯಗಳಲ್ಲೂ ಪರಿಣತಿ ಹೊಂದಬೇಕು: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿರಾಟ್ ಕೊಹ್ಲಿಗೆ ಗಂಭೀರ ಭದ್ರತಾ ಬೆದರಿಕೆ | RCB ಅಭ್ಯಾಸ ಪಂದ್ಯ ರದ್ದು

ಭಾರತ ಕ್ರಿಕೆಟ್ ತಂಡಕ್ಕೆ ಆಘಾತ | ಅಫ್ಘಾನಿಸ್ತಾನ ವಿರುದ್ಧ ಸರಣಿಯಿಂದ ವಿರಾಟ್ ಕೊಹ್ಲಿ ಹೊರಕ್ಕೆ

June 4, 2026
ಶಿವಮೊಗ್ಗ | ಫೆ.21ರಂದು ಉದ್ಯೋಗ ಮೇಳ

MNC ಕಂಪೆನಿಯಲ್ಲಿ ಸಾವಿರಾರು ಉದ್ಯೋಗ | ಶಿವಮೊಗ್ಗದಲ್ಲಿ ಸಂದರ್ಶನ | ಯಾರೆಲ್ಲಾ ಅರ್ಹರು? ನೊಂದಣಿ ಹೇಗೆ?

June 4, 2026
ಭಾರತೀಯ ಸೇನೆ ಮೇಜರ್ ಅಭಿಲಾಷಾ ಬರಾಕ್’ಗೆ ಪ್ರತಿಷ್ಠಿತ UN ಮಿಲಿಟರಿ ಜೆಂಡರ್ ಪ್ರಶಸ್ತಿ

ಭಾರತೀಯ ಸೇನೆ ಮೇಜರ್ ಅಭಿಲಾಷಾ ಬರಾಕ್’ಗೆ ಪ್ರತಿಷ್ಠಿತ UN ಮಿಲಿಟರಿ ಜೆಂಡರ್ ಪ್ರಶಸ್ತಿ

June 4, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL