ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಮಾನ ಮನಸ್ಕರ ತಂಡವಾಗಿರುವ ಅನವರತ ವತಿಯಿಂದ ನ.27 ರಂದು ಸಾಂಸ್ಕೃತಿಕ ಸೊಗಡು ಬಿಂಬಿಸುವ ಸಿಹಿಮೊಗೆ ಸಂಭ್ರಮ-01 ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಅನವರತ ಗೌರವಾಧ್ಯಕ್ಷರೂ ಆದ ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಯಿಂದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಜನಪದ ನೃತ್ಯ, ಜನಪದ ಗೀತೆ, ಚಿತ್ರಕಲೆ ಮತ್ತು ಛಾಯಾಗ್ರಹಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

Also read: ವೈಷ್ಣೋದೇವಿ ಯಾತ್ರೆಗೆ ಪ್ಲಾನ್ ಮಾಡ್ತಿದಿರಾ? ಹಾಗಾದ್ರೆ ನಿಮಗಿಲ್ಲಿದೆ ಗುಡ್ ನ್ಯೂಸ್
ಅಂದು ಸಂಜೆ 6 ಗಂಟೆಗೆ ನಗರದ ಸೈನ್ಸ್ ಮೈದಾನದಲ್ಲಿ ನಾಡಿನ ಹೆಸರಾಂತ ಯಕ್ಷಗಾನ ಕಲಾವಿದರಾದ ಯಕ್ಷ ಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ ಯಕ್ಷ ಸಂಭ್ರಮ ಎಂಬ ವಿಶೇಷ ಶೀರ್ಷಿಕೆಯಡಿಯಲ್ಲಿ ಅಯೋಧ್ಯಾ ದೀಪ ಪ್ರಸಂಗ ಪ್ರಸ್ತುತ ಪಡಿಸಲಿದ್ದಾರೆ ಎಂದರು.
ಪಟ್ಲ ಸತೀಶ್ ಶೆಟ್ಟಿ ಯಕ್ಷಗಾನದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಇವರ ಅಭಿಮಾನಿಗಳು ಕೂಡ ನಾಡಿನಾದ್ಯಂತ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಯಕ್ಷಗಾನದಲ್ಲಿ ಹಲವಾರು ವಿಭಿನ್ನ ಪ್ರಯೋಗಗಳನ್ನು ಮಾಡಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಸ್. ಜ್ಞಾನೇಶ್ವರ್, ಎನ್.ಜಿ. ನಾಗರಾಜ್, ಯಕ್ಷ ಸಂವರ್ಧನ ಟ್ರಸ್ಟ್ನ ಆನಂದ ಶೆಟ್ಟಿ, ಶ್ರೀನಿವಾಸ್ ಆಚಾರ್ಯ, ಕಿರಣ್ ಪೈ, ಮರವಂತೆ ಅಚ್ಯುತ್ ಹೆಬ್ಬಾರ್, ಬಾಬಣ್ಣ, ಅನವರತ ತಂಡದ ಸುನೀಲ್, ನವೀನ್, ಸಹನಾಚೇತನ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post