ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ನರಸಿಂಹ ಗಂಧದಮನೆ, ಉಪಾಧ್ಯಕ್ಷರಾಗಿ ಬಿ.ಎಸ್. ವಿನಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ನರಸಿಂಹ ಗಂಧದಮನೆ, ಯಾವುದೇ ಸಹಕಾರ ಸಂಘಗಳು ಅಭಿವೃದ್ಧಿಯಾಗಲು ಎಲ್ಲರ ಸಹಕಾರ ಅಗತ್ಯ. ಸಹಕಾರ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ. ಠೇವಣಿ ಸಂಗ್ರಹಣೆಗೆ ಆದ್ಯತೆ ನೀಡುವೆ. ಸಾಲ ಸೌಲಭ್ಯವನ್ನು ವಿಸ್ತರಿಸುತ್ತೇನೆ. ಆದರೆ ಸಾಲ ತೆಗೆದುಕೊಂಡವರು ಸರಿಯಾದ ವೇಳೆಗೆ ಮರುಪಾವತಿ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಬಿ.ಎಸ್. ವಿನಯ್, ನಿರ್ದೇಶಕರುಗಳಾದ ಜಿ. ಚಂದ್ರಶೇಖರ್, ಸೋಮಶೇಖರ್, ಈಶ್ವರಾಚಾರಿ, ಲಕ್ಷ್ಮಿ, ನವೀನ್ ಹಾಗೂ ಸಂಘದ ಕಾರ್ಯದರ್ಶಿ ಭರತ್‌ಕುಮಾರ್ ಉಪಸ್ಥಿತರಿದ್ದರು. ಚುನಾವಣಾಧಿಕಾರಿಯಾಗಿ ಸುಮಾ ಕಾರ್ಯ ನಿರ್ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post